ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ: ಸತತ ಆರನೇ ದಿನವೂ ಗಳಿಕೆ

Published 8 ಸೆಪ್ಟೆಂಬರ್ 2023, 13:56 IST
Last Updated 8 ಸೆಪ್ಟೆಂಬರ್ 2023, 13:56 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಷೇರುಪೇಟೆಗಳಲ್ಲಿ ಸತತ ಆರನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು. ಎಚ್‌ಡಿಎಫ್‌ಸಿ ಬ್ಯಾಂಕ್‌, ಎಲ್‌ಆ್ಯಂಡ್‌ಟಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ ಷೇರುಗಳನ್ನು ಹೂಡಿಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ್ದು ಸೂಚ್ಯಂಕಗಳ ಏರಿಕೆಗೆ ನೆರವಾಯಿತು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 333 ಅಂಶ ಏರಿಕೆ ಕಂಡು 66,599 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 93 ಅಂಶ ಹೆಚ್ಚಾಗಿ 19,819 ಅಂಶಗಳಿಗೆ ತಲುಪಿತು. ಆರು ದಿನಗಳ ವಹಿವಾಟಿನಲ್ಲಿ ನಿಫ್ಟಿ 473 ಅಂಶ, ಸೆನ್ಸೆಕ್ಸ್ 1,434 ಅಂಶಗಳಷ್ಟು ಏರಿಕೆ ಕಂಡಿವೆ.

ಮಾರುಕಟ್ಟೆ ಮೌಲ್ಯ ವೃದ್ಧಿ: ಮುಂಬೈ ಷೇರುಪೇಟೆಯ ಮಾರುಕಟ್ಟೆ ಬಂಡವಾಳ ಮೌಲ್ಯವು ಶುಕ್ರವಾರದ ವಹಿವಾಟಿನಲ್ಲಿ ದಾಖಲೆಯ ₹320.94 ಲಕ್ಷ ಕೋಟಿಗೆ ಏರಿಕೆ ಕಂಡಿತು.

ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುವ ಕಂಪನಿಗಳ ಷೇರುಗಳ ಮೇಲೆ ಹೂಡಿಕೆದಾರರು ಹೆಚ್ಚು ಹೂಡಿಕೆ ಮಾಡುತ್ತಿದ್ದಾರೆ ಎಂದು ಕೋಟಕ್‌ ಸೆಕ್ಯುರಿಟೀಸ್‌ ಲಿಮಿಟೆಡ್‌ನ ಉಪಾಧ್ಯಕ್ಷ ಅಮೋಲ್‌ ಅಠಾವಳೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT