ಕರ್ಣಾಟಕ ಬ್ಯಾಂಕ್; ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೇಖರ್ ರಾವ್ ನೇಮಕ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೇಖರ್ ರಾವ್ ನೇಮಕಗೊಂಡಿದ್ದಾರೆ.
ಶುಕ್ರವಾರ ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಶೇಖರ್ ಅವರನ್ನು ಹೆಚ್ಚುವರಿ ನಿರ್ದೇಶಕರ ನೆಲೆಯಲ್ಲಿ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಯಿತು.
ಬ್ಯಾಂಕಿಂಗ್, ಮಾಹಿತಿ ತಂತ್ರಜ್ಞಾನ, ವ್ಯವಹಾರ ನಿರ್ವಹಣೆ, ಕಾರ್ಯತಂತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 29ಕ್ಕೂ ಹೆಚ್ಚು ವರ್ಷಗಳ ಅನುಭವ ಇರುವ ಅವರ ನೇಮಕಕ್ಕೆ ಬ್ಯಾಂಕ್‌ನ ಸಿಇಒ ಮಹಾಬಲೇಶ್ವರ ಎಂ.ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.