ಶಿವಮೊಗ್ಗ: ‘ರಾಜ್ಯದ ಪ್ರಮುಖ ಕೈಗಾರಿಕಾ ಸಂಸ್ಥೆಯಾದ ನಿರಾಣಿ ಗ್ರೂಪ್ ಕರ್ನಾಟಕದಲ್ಲಿ ಬಯೋ ಫ್ಯೂಯೆಲ್, ಎಥೆನಾಲ್ ಹಾಗೂ ಜೈವಿಕ ವಿಲೀನ ಪ್ಲಾಸ್ಟಿಕ್ ಉತ್ಪಾದನಾ ಕ್ಷೇತ್ರದಲ್ಲಿ ಭಾರಿ ಹೂಡಿಕೆ ಮಾಡಲು ಮುಂದಾಗಿದೆ’ ಎಂದು ಸಂಸ್ಥಾಪಕ ಮುರುಗೇಶ್ ನಿರಾಣಿ ತಿಳಿಸಿದರು.

ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ಮುಧೋಳದ 71ನೇ ಶಾಖೆ ಉದ್ಘಾಟನೆ ಅಂಗವಾಗಿ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‘ಪರಿಸರ ಸ್ನೇಹಿ ಕೈಗಾರಿಕೆಗಳ ಅಭಿವೃದ್ಧಿಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿದೆ’ ಎಂದರು.

‘ಸಕ್ಕರೆ ಮತ್ತು ಎಥೆನಾಲ್ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿರುವ ನಿರಾಣಿ ಗ್ರೂಪ್, ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯನ್ನು ಕೇಂದ್ರವಾಗಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಸಾವಿರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ವಿದ್ಯುತ್, ಕೃಷಿ ಆಧಾರಿತ ಕೈಗಾರಿಕೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿಯೂ ಸಂಸ್ಥೆ ತನ್ನ ಸೇವೆಯನ್ನು ವಿಸ್ತರಿಸಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಅಂದಾಜು ₹ 2,000 ಕೋಟಿ ಹೂಡಿಕೆ ಮಾಡುವ ಯೋಜನೆಯನ್ನು ಇತ್ತೀಚೆಗೆ ಘೋಷಿಸಲಾಗಿದೆ. ಈ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೊಸ ಉತ್ತೇಜನ ದೊರೆಯಲಿದೆ’ ಎಂದರು.

ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಕುರಿತು ಮಾತನಾಡಿದ ಅವರು, ‘ಈಗಾಗಲೇ 100ಕ್ಕೂ ಹೆಚ್ಚು ಶಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ಬೀದರ್ನಿಂದ ಮೈಸೂರಿನವರೆಗೆ ನಮ್ಮ ಸೇವೆ ವಿಸ್ತರಣೆಯಾಗಿದೆ. ಶಿವಮೊಗ್ಗದಲ್ಲಿ 71ನೇ ಶಾಖೆ ಆರಂಭಿಸಿರುವುದು ಸಂತಸದ ಸಂಗತಿ’ ಎಂದು ಹೇಳಿದರು.

‘ಕಳೆದ ಸಾಲಿನಲ್ಲಿ ನಮ್ಮ ಸಹಕಾರ ಸಂಘಕ್ಕೆ ₹ 60 ಕೋಟಿ ಲಾಭ ಬಂದಿದೆ. ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ 24X7 ಸೇವೆ ನೀಡಲಾಗುತ್ತಿದೆ. ಶನಿವಾರ ಹಾಗೂ ಭಾನುವಾರ ರಜೆ ಇದ್ದರೂ ತುರ್ತು ಹಣದ ಅವಶ್ಯಕತೆ ಇರುವವರಿಗೆ ಸಹಾಯ ಮಾಡುವ ವ್ಯವಸ್ಥೆ ಇದೆ’ ಎಂದರು.

‘ಠೇವಣಿಗಳ ಮೇಲೆ ಆಕರ್ಷಕ ಬಡ್ಡಿ ದರ ನೀಡಲಾಗುತ್ತಿದ್ದು, ₹ 2 ಲಕ್ಷದವರೆಗೆ ಮಾತ್ರ ನಗದು ಸ್ವೀಕಾರಕ್ಕೆ ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಮೊತ್ತದ ವ್ಯವಹಾರಗಳನ್ನು ಆನ್ಲೈನ್ ಮೂಲಕ ನಡೆಸಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

‘25 ವರ್ಷಗಳ ಹಿಂದೆ ದಿನಕ್ಕೆ 500 ಟನ್ ಕಬ್ಬು ಅರೆಯುವ ಸಾಮರ್ಥ್ಯದ ಕಾರ್ಖಾನೆಯಿಂದ ಆರಂಭವಾದ ನಮ್ಮ ಸಂಸ್ಥೆ, ಇಂದು ದೇಶದಲ್ಲೇ ಅತಿ ಹೆಚ್ಚು ಕಬ್ಬು ಅರೆಯುವ ಕಾರ್ಖಾನೆಯಾಗಿ ಬೆಳೆದಿದೆ’ ಎಂದರು.

‘ಇನ್ನು ಒಂದು ವರ್ಷಾರ್ಧದಲ್ಲಿ ಪ್ಲಾಸ್ಟಿಕ್ಗೆ ಪರ್ಯಾಯ ಗ್ಲಾಸ್ ಉತ್ಪಾದನೆ ಮಾಡುವ ಉದ್ದೇಶವಿದ್ದು, ಪ್ರಸ್ತುತ ನಿರಾಣಿ ಗ್ರೂಪ್ನಲ್ಲಿ ಅಂದಾಜು 72,000 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಓಂಕಾರಪ್ಪ, ಮೈಲಾರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-569622378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.