ಗುರುವಾರ , ಡಿಸೆಂಬರ್ 8, 2022
18 °C

ಹೂಡಿಕೆದಾರರನ್ನು ಆಮಂತ್ರಿಸಿದ ಶಿವರಾಜ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೈಗಾರಿಕೆಗಳಿಗೆ ಅಗತ್ಯ ಪ್ರಮಾಣದಲ್ಲಿ ಜಮೀನು ಲಭ್ಯವಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದರು.

ಇಂದೋರ್‌ನಲ್ಲಿ ಜನವರಿಯಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಉದ್ಯಮಿಗಳ ಜೊತೆ ಚರ್ಚಿಸಲು ಅವರು ಬೆಂಗಳೂರಿಗೆ ಬಂದಿದ್ದರು. ಉದ್ಯಮಿಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ನೀರು ಹಾಗೂ ವಿದ್ಯುತ್‌ ಕೂಡ ರಾಜ್ಯದಲ್ಲಿ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.

‘ಕೈಗಾರಿಕೆಗಳ ಅಗತ್ಯಕ್ಕೆ ಅನುಗುಣವಾಗಿ ನೀತಿಗಳಲ್ಲಿ ಸೂಕ್ತ ಬದಲಾವಣೆ ತರಲು ಸರ್ಕಾರ ಒಪ್ಪುತ್ತದೆ’ ಎಂದು ಅವರು ಭರವಸೆ ನೀಡಿದರು. ಉದ್ಯಮಿಗಳು, ಹೂಡಿಕೆದಾರರು ಸಮಾವೇಶಕ್ಕೆ ಬರಬೇಕು ಎಂದು ಆಹ್ವಾನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು