ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳ್ಳಿ ದರ ₹3,100 ಏರಿಕೆ

Published 28 ಮೇ 2024, 23:52 IST
Last Updated 28 ಮೇ 2024, 23:52 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಬೆಳ್ಳಿ ಧಾರಣೆಯು ಕೆ.ಜಿಗೆ ₹3,100 ಏರಿಕೆ ಯಾಗಿದ್ದು, ₹95,950ಕ್ಕೆ ತಲುಪಿದೆ.

ಆದರೆ, ಹಳದಿ ಲೋಹದ ದರದಲ್ಲಿ ಹೆಚ್ಚಿನ ಏರಿಕೆಯಾಗಿಲ್ಲ. 10 ಗ್ರಾಂ ಚಿನ್ನದ ದರ ₹130 ಏರಿಕೆಯಾಗಿ, ₹72,950 ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. 

‘ಅಮೆರಿಕದಲ್ಲಿ ಚಿಲ್ಲರೆ ಹಣದು ಬ್ಬರವು ಇಳಿಕೆಯಾದರಷ್ಟೇ ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಯಿದೆ. ಹಾಗಾಗಿ, ಹೂಡಿಕೆ ದಾರರು ಹಣದುಬ್ಬರದ ಇಳಿಕೆಯತ್ತ ದೃಷ್ಟಿ ನೆಟ್ಟಿದ್ದಾರೆ. ಬಡ್ಡಿದರ ಕಡಿತವಾದರೆ ಚಿನ್ನದ ಬೆಲೆ ಮೇಲೆ ಮತ್ತಷ್ಟು ಪರಿಣಾಮ ಬೀರಲಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ತಿಳಿಸಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT