ಗುರುವಾರ , ಮೇ 26, 2022
27 °C

2022–23: ಜಿಡಿಪಿ ಶೇ 9ರಷ್ಟು ಬೆಳವಣಿಗೆ ನಿರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು 2021–22ನೇ ಸಾಲಿಗೆ ಒಂದೇ ಸಂಪುಟದ ಆರ್ಥಿಕ ಸಮೀಕ್ಷೆ ವರದಿಯನ್ನು ಹೊರತರುವ ಸಾಧ್ಯತೆ ಇದೆ. ಮುಂದಿನ ಹಣಕಾಸು ವರ್ಷದಲ್ಲಿ (2022–23) ದೇಶದ ಆರ್ಥಿಕತೆಯು (ಜಿಡಿಪಿ) ಶೇಕಡ 9ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸಮೀಕ್ಷೆಯು ಅಂದಾಜು ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ.

ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿಯು ಶೇ 7.6ರಷ್ಟು ಬೆಳವಣಿಗೆ ಕಾಣಲಿದೆ ಎಂದು ಇಂಡಿಯಾ ರೇಟಿಂಗ್ಸ್‌ ಆ್ಯಂಡ್‌ ರಿಸರ್ಚ್‌ ಹೇಳಿದೆ. ಐಸಿಆರ್‌ಎ ವರದಿಯ ಪ್ರಕಾರ, ಜಿಡಿಪಿಯು ಪ್ರಸಕ್ತ ಮತ್ತು ಮುಂದಿನ ಹಣಕಾಸು ವರ್ಷದಲ್ಲಿಯೂ ಶೇ 9ರಷ್ಟ ಬೆಳವಣಿಗೆ ದರವನ್ನು ಕಾಯ್ದುಕೊಳ್ಳಲಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಮುಂಗಡ ಅಂದಾಜಿನ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಶೇ 9.2ರಷ್ಟು ಬೆಳವಣಿಗೆ ಕಾಣಲಿದೆ. ಇದು ಆರ್‌ಬಿಐ ಮಾಡಿರುವ ಶೇ 9.5ಕ್ಕಿಂತಲೂ ಕಡಿಮೆ.

ದೇಶದ ಆರ್ಥಿಕತೆಯು 2022ರ ಮಾರ್ಚ್‌ಗೆ ಅಂತ್ಯವಾಗುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 11ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹಿಂದಿನ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಿದ್ದ 2020–21ರ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು