ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್‌ಎಂಇ‘ಗಳ ನೆರವಿಗೆ ಸಹಾಯವಾಣಿ

Last Updated 30 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು:ಕೋವಿಡ್‌ ಬಿಕ್ಕಟ್ಟಿನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಿರು ಮತ್ತು ಸಣ್ಣ ಉದ್ದಿಮೆಗಳಿಗೆ (ಎಸ್‌ಎಂಇ) ನೆರವಾಗಲು ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಸಹಾಯವಾಣಿ ಆರಂಭಿಸಿದೆ.

ಗ್ಲೋಬಲ್‌ ಅಲಯನ್ಸ್‌ ಫಾರ್‌ ಮಾಸ್‌ ಎಂಟರ್‌ಪ್ರಿನ್ಯೂಅರ್‌ಶಿಪ್‌ನ (ಜಿಎಎಂಇ) ಸಹಯೋಗದಲ್ಲಿ ಸಹಾಯವಾಣಿ 73977 79520 ಆರಂಭಿಸಲಾಗಿದೆ. ಹಣಕಾಸು, ಮಾರುಕಟ್ಟೆ, ಡಿಜಿಟಲ್ ಸಾಧನ, ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ಉದ್ಯಮಿಗಳ ಅನೇಕ ಅನುಮಾನ ಪರಿಹರಿಸಲು ಇದು ನೆರವಾಗಲಿದೆ.

ತಜ್ಞರು ಮತ್ತು ಮಾರ್ಗದರ್ಶಕರ ಜತೆ ಉದ್ಯಮಿಗಳನ್ನು ಸಂಪರ್ಕಿಸಲು ನೆರವಾಗುತ್ತದೆ. ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಂಜೆ 6.30ರವರೆಗೆ ಸಹಾಯವಾಣಿಯು ಕಾರ್ಯನಿರ್ವಹಿಸಲಿದೆ ಎಂದು ‘ಜಿಎಎಂಐ’ನ ಸಹ ಸ್ಥಾಪಕ ಮದನ್‌ ಪದಕಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT