ಸಣ್ಣ ಉಳಿತಾಯದ ಬಡ್ಡಿದರ ಕಡಿತ?

ನವದೆಹಲಿ: ಮುಂದಿನ ತ್ರೈಮಾಸಿಕದಲ್ಲಿ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಕಡಿತ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.
ಉಳಿತಾಯದಿಂದ ಬರುವ ಬಡ್ಡಿ ದರವನ್ನೇ ನಂಬಿಕೊಂಡಿರುವ ಹಿರಿಯ ನಾಗರಿಕರು ಇದರಿಂದ ಹೆಚ್ಚು ಸಮಸ್ಯೆಗೆ ಒಳಗಾಗಲಿದ್ದಾರೆ.
ಬ್ಯಾಂಕ್‌ಗಳು ರೆಪೊ ದರ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ತ್ವರಿತವಾಗಿ ವರ್ಗಾಯಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
2019–20ನೇ ಹಣಕಾಸು ವರ್ಷದ 4ನೇ ತ್ರೈಮಾಸಿಕಕ್ಕೆ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿತ್ತು.
ಸಣ್ಣ ಉಳಿತಾಯ ಯೋಜನೆಗಳಿಗೆ ಗರಿಷ್ಠ ಬಡ್ಡಿದರ ಇದ್ದರೆ ಬ್ಯಾಂಕ್‌ಗಳಿಗೆ ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಕಡಿತ ಮಾಡಲು ಸಾಧ್ಯವಾಗುವುದಿಲ್ಲ ಎನ್ನುವುದು ಬ್ಯಾಂಕ್‌ಗಳು ವಾದ.
ಹಾಲಿ ಬಡ್ಡಿದರ ವಿವರ
ಪಿಪಿಎಫ್ ಶೇ 7.9, ಎನ್‌ಎಸ್‌ಇ ಶೇ 7.9, ಕಿಸಾನ್ ವಿಕಾಸ ಪತ್ರ ಶೇ 7.6, ಹಿರಿಯ ನಾಗರಿಕರ ಉಳಿತಾಯ ಯೋಜನೆ ಶೇ 8.6.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.