ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೀಘ್ರವೇ ಹೊಸ ರಾಷ್ಟ್ರೀಯ ಪ್ರವಾಸಿ ನೀತಿ’

Last Updated 4 ಜೂನ್ 2022, 18:55 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಒಳಗಾಗಿರುವ ಪ್ರವಾಸೋದ್ಯಮಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಶೀಘ್ರವೇ ಹೊಸ ಪ್ರವಾಸಿ ನೀತಿ ಪ್ರಕಟಿಸಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕರಡು ನೀತಿಯ ಕುರಿತು ಸಲಹೆಗಳನ್ನು ಪಡೆಯಲು ಪ್ರವಾಸೋದ್ಯಮ ಸಚಿವಾಲಯ ಈಚೆಗಷ್ಟೇ ಸಭೆ ನಡೆಸಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ಸೇವಾ ವಲಯವು ಕೋವಿಡ್‌ ಸಾಂಕ್ರಾಮಿಕವು ಉಂಟುಮಾಡಿರುವ ನಷ್ಟದಿಂದ ಹೊರಬರಲು ಆರಂಭಿಸಿದ್ದು, ವಲಯಕ್ಕೆ ಹೆಚ್ಚಿನ ಬೆಂಬಲ ನೀಡುವ ಸಲುವಾಗಿ ಈ ನೀತಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಭಾರತವನ್ನು ಹೆಚ್ಚು ಬೇಡಿಕೆ ಇರುವ 5 ಪ್ರವಾಸಿ ತಾಣಗಳಲ್ಲಿ ಒಂದನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ.

ಭಾರತದ ಡಿಜಿಟಲ್ ಪ್ರವಾಸದ ಅಭಿವೃದ್ಧಿಗೆ ಪರ್ಯಾಯ ಮೂಲಗಳಿಂದ ಹಣ ಪಡೆಯುವ ಬಗ್ಗೆಯೂ ಸರ್ಕಾರ ಆಲೋಚನೆ ನಡೆಸುತ್ತಿದೆ. ಈ ವಲಯದಲ್ಲಿ ವಿದೇಶಿ ನೆರ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ನಿಯಮ ಸಡಿಲಿಸುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT