ಬುಧವಾರ, ಫೆಬ್ರವರಿ 26, 2020
19 °C

ವಿದೇಶಿ ಬಾಂಡ್‌ ಮರುಚಿಂತನೆ ಇಲ್ಲ: ಸಚಿವೆ ನಿರ್ಮಲಾ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಕರೆನ್ಸಿಗಳ ರೂಪದಲ್ಲಿ ಸಾಗರೋತ್ತರ ಸಾಲ ಪಡೆಯುವ ಬಗ್ಗೆ ಮರು ಚಿಂತನೆ ನಡೆಸುವ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಳ್ಳಿ ಹಾಕಿದ್ದಾರೆ.

‘ವಿದೇಶಿ ಬಾಂಡ್‌ಗಳ ಮೂಲಕ ಸಾಲ ಸಂಗ್ರಹಿಸುವ ಆಲೋಚನೆ ಬಗ್ಗೆ ಪರಾಮರ್ಶೆ ನಡೆಸಲು ನಾನು ಯಾರೊಬ್ಬರನ್ನೂ ಕೇಳಿಕೊಂಡಿಲ್ಲ. ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಈ ನಿಟ್ಟಿನಲ್ಲಿ ಮುಂದುವರೆಯಲಾಗುವುದು’ ಎಂದು ಅವರು ‘ಇಕನಾಮಿಕ್‌ ಟೈಮ್ಸ್‌’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ವಿದೇಶಿ ಬಾಂಡ್‌ಗಳಿಗೆ ರಾಜಕೀಯ ಮತ್ತು ಆರ್ಥಿಕ ವಲಯಗಳಲ್ಲಿ ಆಕ್ಷೇಪ ವ್ಯಕ್ತವಾಗಿರುವುದರಿಂದ ಈ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಪ್ರಧಾನಿ ಕಚೇರಿಯು ಆದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ನಿರ್ಮಲಾ ಅಲ್ಲಗಳೆದಿದ್ದಾರೆ.

‘ವಿದೇಶಿ ಬಾಂಡ್‌ಗಳಿಂದ ಸಂಗ್ರಹಿಸಬಹುದಾದ ಮೊತ್ತ, ಬಾಂಡ್‌ ಬಿಡುಗಡೆ ಸಮಯ ಮತ್ತಿತರ ವಿವರಗಳನ್ನು ಇನ್ನೂ ಅಂತಿಮ
ಗೊಳಿಸಿಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು