ಶನಿವಾರ, ಜುಲೈ 31, 2021
25 °C
13ನೇ ವರ್ಷವೂ ಬಿಬಿಬಿ ಮೈನಸ್‌ ರೇಟಿಂಗ್ಸ್‌ ನೀಡಿದ ಸಂಸ್ಥೆ

ವಿತ್ತೀಯ ಶಿಸ್ತು ಕಾಯ್ದುಕೊಳ್ಳುವಲ್ಲಿ ಭಾರತ ವಿಫಲ: ಎಸ್‌ಆ್ಯಂಡ್‌ಪಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿತ್ತೀಯ ಶಿಸ್ತು ಕಾಯ್ದುಕೊಳ್ಳುವಲ್ಲಿ ಭಾರತಕ್ಕೆ ನೀಡಿರುವ ರೇಟಿಂಗ್ಸ್‌ ಬದಲಿಸಲು ಜಾಗತಿಕ ಸಂಸ್ಥೆ ಎಸ್‌ಆ್ಯಂಡ್‌ಪಿ ನಿರಾಕರಿಸಿದೆ. ಸತತ 13ನೇ ವರ್ಷವೂ ‘ಬಿಬಿಬಿ ಮೈನಸ್‌’ ನೀಡಿದೆ. ಆದರೆ, ಆರ್ಥಿಕ ಮುನ್ನೋಟ ಸ್ಥಿರವಾಗಿರಲಿದೆ ಎಂದು ತಿಳಿಸಿದೆ.

ವಿತ್ತೀಯ ಶಿಸ್ತು ಕಾಯ್ದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ದೇಶದ ವಿತ್ತೀಯ ಸ್ಥಿತಿಯು ಅಸ್ಥಿರವಾಗಿದೆ. ಆದರೆ, 2021ರಿಂದ ವಿತ್ತೀಯ ಸ್ಥಿತಿ ಮತ್ತು ಆರ್ಥಿಕತೆಯು ಸ್ಥಿರತೆಗೆ ಬರಲಿದ್ದು, ಚೇತರಿಸಿಕೊಳ್ಳಲು ಆರಂಭಿಸಲಿದೆ. ದೀರ್ಘಾವಧಿಯಲ್ಲಿ ಜಿಡಿಪಿ ಬೆಳವಣಿಗೆಗೆ ಅಡೆತಡೆಗಳು ಹೆಚ್ಚಾಗುತ್ತಿದ್ದು, ಆರ್ಥಿಕ ಸುಧಾರಣಾ ಕ್ರಮಗಳನ್ನು ಸರಿಯಾಗಿ ಜಾರಿಗೊಳಿಸಿದರೆ ಗರಿಷ್ಠ ಮಟ್ಟದ ಬೆಳವಣಿಗೆ ಸಾಧ್ಯವಾಗಲಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರ ಶೇ 5ಕ್ಕೆ ಇಳಿಕೆಯಾಗಲಿದೆ ಎಂದು ಹೇಳಿರುವ ಸಂಸ್ಥೆಯು, ಭಾರತವು ಕೋವಿಡ್‌–19 ಬಿಕ್ಕಟ್ಟಿನಿಂದ ಹೊರಬಂದು ಚೇತರಿಸಿಕೊಳ್ಳುವ ನಿರೀಕ್ಷೆ ಇರುವುದರಿಂದ ಸ್ಥಿರ ಮುನ್ನೋಟ ನೀಡಲಾಗಿದೆ ಎಂದು ತಿಳಿಸಿದೆ.

2021–22ರಲ್ಲಿ ಜಿಡಿಪಿಯು ಶೇ 8.5ರಷ್ಟಾಗಲಿದೆ. ಆದರೆ, 2022–23ರಲ್ಲಿ ಶೇ 6.5ಕ್ಕೆ ಇಳಿಕೆ ಕಾಣಲಿದೆ ಎಂದೂ ಹೇಳಿದೆ.

ಜಿಡಿಪಿ ಬೆಳವಣಿಗೆಯು ಅಂದಾಜಿಗಿಂತಲೂ ಕೆಳ ಮಟ್ಟಕ್ಕೆ ಇಳಿಕೆ ಕಂಡರೆ, ರೇಟಿಂಗ್ಸ್‌ನಲ್ಲಿ ಬದಲಾವಣೆ ಮಾಡಲಾಗುವುದು. ವಿತ್ತೀಯ ಕೊರತೆಯಲ್ಲಿ ಏರಿಕೆ ಮತ್ತು ರಾಜಕೀಯ ವಿದ್ಯಮಾನಗಳು ಆರ್ಥಿಕ ಸುಧಾರಣಾ ಕ್ರಮಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೂ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು