ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಸಿದ್ಧತೆ: ಗೋಯಲ್ ಮೆಚ್ಚುಗೆ

ಅಧಿಕಾರಿಗಳ ಕಾರ್ಯವೈಖರಿ ಕುರಿತು ಸಭೆ; ನೀತಿ ಸಂಹಿತೆ ಜಾರಿ, ಭದ್ರತೆ ಪರಿಶೀಲನೆ
Last Updated 6 ಮೇ 2018, 11:03 IST
ಅಕ್ಷರ ಗಾತ್ರ

ಹಾವೇರಿ: ವಿಧಾನಸಭಾ ಚುನಾವಣೆಗೆ ಜಿಲ್ಲಾಡಳಿತ ಕೈಗೊಂಡ ಪೂರ್ವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಸಮೀಪದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ‘ಚುನಾವಣೆ ಸಿದ್ಧತೆಗಳ ಸಭೆ’ಯಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಅವರಿಂದ ಮತಗಟ್ಟೆ, ಮತದಾನ ಸಿದ್ಧತೆ, ಮತ ಎಣಿಕೆ, ನೀತಿ ಸಂಹಿತೆ ನಿರ್ವಹಣೆ, ಭದ್ರತೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.

ಬಳಿಕ ಮಾತನಾಡಿದ ರಜನೀಶ್ ಗೋಯಲ್, ಮಾಹಿತಿ ಸಹ ಅತ್ಯಂತ ಸಮರ್ಪಕವಾಗಿದೆ. ಚುನಾವಣೆ ಸಂಬಂಧಿಸಿದಂತೆ ಉತ್ತಮ ನಿರ್ವಹಣೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮತಗಟ್ಟೆಯಲ್ಲಿ ಮತದಾರರಿಗೆ ವೋಟರ್ ಸ್ಲಿಪ್ ವಿತರಣೆ, ಬ್ಯಾಲೆಟ್, ವಿವಿಪ್ಯಾಟ್‌ಗಳ ಕಾರ್ಯನಿರ್ವಹಣೆ, ಸಿಬ್ಬಂದಿ ತರಬೇತಿ, ಚುನಾವಣೆಗೆ ಸಂಬಂಧಿಸಿದ ದೂರುಗಳ ಸ್ವೀಕಾರ ಮತ್ತು ವಿಲೇವಾರಿ, ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಯ ಕಾರ್ಯ ನಿರ್ವಹಣೆ, ಪ್ರತಿ ಮತಗಟ್ಟೆಯ ಸೂಕ್ಷ್ಮತೆಗೆ ಅನುಗಣುಗುಣವಾಗಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಪರಿಶೀಲಿಸಿ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಮಾತನಾಡಿ, ಆಯಾ ಕ್ಷೇತ್ರದ ಅಭ್ಯರ್ಥಿಗಳು ವೆಚ್ಚದ ವಿವರವನ್ನು ನೀಡುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದು, ಮೂವರು ಚಿತ್ರ ನಟರು ಪ್ರಚಾರಕ್ಕಾಗಿ ಜಿಲ್ಲೆಗೆ ಬಂದಿದ್ದಾರೆ ಎಂದರು.

ಫ್ಲೈಯಿಂಗ್ ಸ್ಕ್ವಾಡ್ ಸೇರಿದಂತೆ ನೀತಿ ಸಂಹಿತೆ ಹಾಗೂ ವೆಚ್ಚ ನಿರ್ವಹಣಾ ಸಮಿತಿಗೆ ರಚಿಸಲಾದ ಸಮಿತಿಗಳು, ತೀವ್ರ ನಿಗಾ ವಹಿಸಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಒಟ್ಟು 1,465 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 14 ಮತಗಟ್ಟೆಗಳನ್ನು ‘ಸಖಿ ಮತಗಟ್ಟೆ’ಗಳೆಂದು ಗುರುತಿಸಲಾಗಿದೆ.

ಕಳೆದ ಬಾರಿಯ ಚುನಾವಣೆ ಆಧರಿಸಿ 300 ಮತಗಟ್ಟೆಗಳನು ಕ್ರಿಟಿಕಲ್ ಹಾಗೂ ಪೊಲೀಸ್ ಎಚ್ಚರಿಕೆಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕ್ರಿಟಿಕಲ್ ಮತಗಟ್ಟೆಗಳಿಗೆ ಸಿ.ಎ.ಎಫ್ ತುಕಡಿ ಹಾಗೂ ಸಾಮಾನ್ಯ ಮತಗಟ್ಟೆಗಳಿಗೆ ಹೆಡ್‌ ಕಾನ್‌ಸ್ಟೆಬಲ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಈಗಾಗಲೇ ಮನೆ ಮನೆಗೆ ವೋಟರ್ ಸ್ಲಿಪ್ ವಿತರಣೆ ಕಾರ್ಯ ಕೈಗೊಳ್ಳಲಾಗಿದೆ. ಶೇ 99 ರಷ್ಟು ಎಪಿಕ್ ಕಾರ್ಡ್‌ಗಳನ್ನು ಮತದಾರರು ಹೊಂದಿದ್ದಾರೆ. ಮತದಾರರ ಜಾಗೃತಿಗಾಗಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ವಿ.ವಿ.ಪ್ಯಾಟ್ ಕುರಿತಂತೆ ಸೆಕ್ಟರ್ ಅಧಿಕಾರಿಗಳ ಮೂಲಕ ಜಾಗೃತಿ ಮೂಡಿಸಲಾಗಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಂ ಪೊಲೀಸ್ ನಿಯೋಜನೆ ಕುರಿತಂತೆ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಇದ್ದರು.

**
ಪ್ರತಿ ವಿಷಯಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಗಣಿಸಿ, ವ್ಯವಸ್ಥಿತವಾಗಿ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ
– ಡಾ. ರಜನೀಶ್ ಗೋಯಲ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT