ಬೆಳಗಾವಿ: ಸ್ಟಾರ್ ಏರ್‌ಲೈನ್ಸ್ ಸಂಸ್ಥೆಯು, ಬೆಳಗಾವಿ– ಬೆಂಗಳೂರು ನಡುವೆ ಸೋಮವಾರದಿಂದ ವಿಮಾನಯಾನ ಸೇವೆ ಆರಂಭಿಸಿದೆ.

ಮಂಗಳವಾರ ಹೊರತುಪಡಿಸಿ ವಾರದ ಎಲ್ಲ ದಿನವೂ ವಿಮಾನ ಹಾರಾಟ ನಡೆಸಲಿದೆ. ಮಧ್ಯಾಹ್ನ 1.25ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನ, ಮಧ್ಯಾಹ್ನ 2.30ಕ್ಕೆ ಬೆಳಗಾವಿ ತಲುಪಲಿದೆ. ಅದೇ ವಿಮಾನ ಮಧ್ಯಾಹ್ನ 3ಕ್ಕೆ ಬೆಳಗಾವಿಯಿಂದ ವಾಪಸ್ ಹೊರಡಲಿದ್ದು, ಸಂಜೆ 4.05ಕ್ಕೆ ಬೆಂಗಳೂರು ತಲುಪಲಿದೆ. ಟಿಕೆಟ್ ದರ ₹1,999 ಇದೆ.

ಸಂಸ್ಥೆಯ ಅಧ್ಯಕ್ಷ ಸಂಜಯ ಘೋಡಾವತ್, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಸಂಸದ ಪ್ರಕಾಶ ಹುಕ್ಕೇರಿ, ಸಚಿವ ಆರ್.ವಿ. ದೇಶಪಾಂಡೆ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.