ಮಂಗಳವಾರ, ಸೆಪ್ಟೆಂಬರ್ 24, 2019
28 °C
ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್‌ ಅಭಿಪ್ರಾಯ

ಪ್ರಗತಿಗೆ ರಾಜ್ಯಗಳೇ ಚಾಲಕ ಶಕ್ತಿ: ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್

Published:
Updated:

ನವದೆಹಲಿ (ಪಿಟಿಐ): ‘ದೇಶದ ಆರ್ಥಿಕತೆಯ ಗಾತ್ರವನ್ನು ₹ 350 ಲಕ್ಷ ಕೋಟಿಗೆ ತಲುಪಿಸಲು ರಾಜ್ಯಗಳು ಚಾಲಕ ಶಕ್ತಿಯಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್ ಹೇಳಿದ್ದಾರೆ.

ಪಿಎಚ್‌ಡಿ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಮತ್ತು ಪರಸ್ಪರ ಕಲಿಕಾ ಮನೋಧರ್ಮ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ. 

‘ಕೃಷಿ ಮತ್ತು ಕಾರ್ಮಿಕ ವಲಯಗಳಲ್ಲಿ ಸಾಂಸ್ಥಿಕ ಸುಧಾರಣೆಯ ಆದರೆ ಜಿಡಿಪಿ ಬೆಳವಣಿಗೆ ದರದಲ್ಲಿಯೂ ಏರಿಕೆ ಸಾಧ್ಯ’ ಎಂದಿದ್ದಾರೆ.

Post Comments (+)