ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರಕ್ಕೆ ₹ 1,468 ಕೋಟಿ ಲಾಭ

Last Updated 30 ಜನವರಿ 2021, 11:06 IST
ಅಕ್ಷರ ಗಾತ್ರ

ನವದೆಹಲಿ:ದೇಶದ ಅತಿದೊಡ್ಡ ಉಕ್ಕು ತಯಾರಿಕಾ ಸಂಸ್ಥೆಯಾಗಿರುವ ಸರ್ಕಾರಿ ಸ್ವಾಮ್ಯದ ಭಾರತೀಯ ಉಕ್ಕು ಪ್ರಾಧಿಕಾರವು (ಸೇಲ್‌) ಅಕ್ಟೋಬರ್‌–ಡಿಸೆಂಬರ್‌ ತ್ರೈಮಾಸಿಕದಲ್ಲಿ ₹ 1,468 ಕೋಟಿ ನಿವ್ವಳ ಲಾಭ ಗಳಿಸಿದೆ. ವರಮಾನದಲ್ಲಿ ಹೆಚ್ಚಳವೇ ಇದಕ್ಕೆ ಕಾರಣ ಎಂದು ತಿಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 344 ಕೋಟಿ ನಷ್ಟ ಅನುಭವಿಸಿತ್ತು.

ಕಂಪನಿಯ ಒಟ್ಟಾರ ವರಮಾನ ₹ 16,715 ಕೋಟಿಗಳಿಂದ ₹ 19,997 ಕೋಟಿಗಳಿಗೆ ಏರಿಕೆ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಒಟ್ಟಾರೆ ವೆಚ್ಚ ಸಹ ₹ 17,313 ಕೋಟಿಗಳಿಂದ ₹ 16,407 ಕೋಟಿಗಳಿಗೆ ಇಳಿಕೆಯಾಗಿದೆ. ತ್ರೈಮಾಸಿಕದ ಅವಧಿಯಲ್ಲಿ 43.7 ಲಕ್ಷ ಟನ್‌ ಕಚ್ಚಾ ಉಕ್ಕು ಉತ್ಪಾದನೆ ಮಾಡಿದ್ದು, ಹಿಂದಿನ ಬಾರಿಗೆ ಹೋಲಿಸಿದರೆ ಶೇ 9ರಷ್ಟು ಬೆಳವಣಿಗೆ ಸಾಧ್ಯವಾಗಿದೆ ಎಂದು ತಿಳಿಸಿದೆ.

‘ಎಲ್ಲಾ ರೀತಿಯ ಸವಾಲುಗಳ ನಡುವೆಯೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯು ಒಟ್ಟಾರೆಯಾಗಿ ಸುಧಾರಣೆ ಕಂಡುಕೊಂಡಿದೆ. ಲಾಕ್‌ಡೌನ್‌ ನಿರ್ಬಂಧಗಳನ್ನು ತೆಗೆಯಲು ಆರಂಭಿಸುತ್ತಿದ್ದಂತೆಯೇ ಹೆಚ್ಚುತ್ತಿರುವ ಉಕ್ಕು ಬೇಡಿಕೆಯನ್ನು ಪೂರೈಸಲು ಕಂಪನಿ ಸಜ್ಜಾಯಿತು’ ಎಂದು ಕಂಪನಿಯ ಅಧ್ಯಕ್ಷ ಸೋಮ ಮೊಂಡಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT