ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ಕಿನ ಬೆಲೆ ಇಳಿಕೆ ಸಾಧ್ಯತೆ

Last Updated 10 ಮೇ 2022, 2:22 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಎರಡು ವರ್ಷಗಳಿಂದ ಏರುತ್ತಿರುವ ಉಕ್ಕಿನ ಬೆಲೆಯು ಇಳಿಕೆ ಆಗುವ ನಿರೀಕ್ಷೆ ಇದೆ. ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಉಕ್ಕಿನ ಬೆಲೆಯು ಟನ್‌ಗೆ ₹ 60 ಸಾವಿರಕ್ಕೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕ್ರಿಸಿಲ್ ವರದಿ ಹೇಳಿದೆ.

ಹಿಂದಿನ ತಿಂಗಳು ಉಕ್ಕಿನ ಬೆಲೆಯು ಟನ್‌ಗೆ ₹ 76 ಸಾವಿರಕ್ಕೆ ತಲುಪಿತ್ತು. ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಗಳು, ರಷ್ಯಾ–ಉಕ್ರೇನ್‌ ಯುದ್ಧದಿಂದಾಗಿ ಸೃಷ್ಟಿಯಾದ ಜಾಗತಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದ್ದು, ಉಕ್ಕಿನ ಬೆಲೆ ಕೂಡ ತುಟ್ಟಿಯಾಗಿದೆ ಎಂದು ವರದಿ ಹೇಳಿದೆ.

ಮುಂಗಾರು ಆರಂಭವಾದ ನಂತರದಲ್ಲಿ ನಿರ್ಮಾಣ ಚಟುವಟಿಕೆಗಳು ತಾತ್ಕಾಲಿಕವಾಗಿ ಸ್ಥಗಿತವಾಗುತ್ತವೆ. ಈ ಕಾರಣದಿಂದಾಗಿಯೂ ಬೆಲೆ ಇಳಿಕೆ ಆಗಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT