ಮಂಗಳವಾರ, ಆಗಸ್ಟ್ 20, 2019
24 °C

ಬಡ್ಡಿದರ ಕಡಿತ ನಿರೀಕ್ಷೆ ಷೇರುಪೇಟೆ ಚೇತರಿಕೆ

Published:
Updated:

ಮುಂಬೈ (ಪಿಟಿಐ): ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬುಧವಾರ ರೆಪೊ ದರದಲ್ಲಿ ಕಡಿತ ಮಾಡುವ ನಿರೀಕ್ಷೆಯಿಂದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರ ತುಸು ಚೇತರಿಕೆ ಕಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 277 ಅಂಶ ಹೆಚ್ಚಾಗಿ 37,977 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 86 ಅಂಶ ಹೆಚ್ಚಾಗಿ 10,948 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಷೇರುಪೇಟೆಯಿಂದ ವಿದೇಶಿ ಬಂಡವಾಳ ಹೊರಹರಿವು ಹೆಚ್ಚಾಗಿದೆ. ಹೀಗಾಗಿ ವಿದೇಶಿ ಸಾಂಸ್ಥಿಕ ಹೂಡಿಕೆ (ಎಫ್‌ಪಿಐ) ಮೇಲೆ ವಿಧಿಸಿರುವ ಸರ್ಚಾರ್ಜ್‌ ಕುರಿತು ಪರಿಶೀಲನೆ  ನಡೆಸಲು ಸರ್ಕಾರ ಮುಂದಾಗಿದೆ.

ಆರ್ಥಿಕತೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ವಿವಿಧ ವಲಯಗಳ ಪ್ರತಿನಿಧಿಗಳ ಜತೆ ಸರಣಿ ಸಭೆ ಆರಂಭಿಸಿದ್ದಾರೆ. ಈ ಬೆಳವಣಿಗೆಗಳು ಸಹ ಷೇರುಪೇಟೆ ಚೇತರಿಕೆಗೆ ನೆರವಾಗಿದೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಸತತ ನಾಲ್ಕನೇ ವಹಿವಾಟಿನಲ್ಲಿಯೂ ಇಳಿಕೆ ಕಂಡಿದೆ.

ಮಂಗಳವಾರದ ವಹಿವಾಟಿನಲ್ಲಿ 8 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ
₹ 70.81ಕ್ಕೆ ಇಳಿಕೆಯಾಗಿದೆ.

ಬ್ರೆಂಟ್‌ ತೈಲ ದರ ಶೇ 0.12ರಷ್ಟು ಹೆಚ್ಚಾಗಿ ಒಂದು ಬ್ಯಾರೆಲ್‌ಗೆ 59.88 ಡಾಲರ್‌ಗಳಂತೆ ಮಾರಾಟವಾಯಿತು.

 

Post Comments (+)