ಮುಂಬೈ: ಮೂರು ದಿನಗಳ ವಾರದ ವಹಿವಾಟು ಅವಧಿಯಲ್ಲಿ ಷೇರುಪೇಟೆಗಳು ಸಕಾರಾತ್ಮಕ ಅಂತ್ಯ ಕಂಡಿವೆ.

ಹೂಡಿಕೆದಾರರ ಸಂಪತ್ತು ಮೌಲ್ಯ ₹ 1.53 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು, ಷೇರುಪೇಟೆಯ ಬಂಡವಾಳ ಮೌಲ್ಯ ₹ 152 ಲಕ್ಷ ಕೋಟಿಗಳಿಂದ ₹ 153.53 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 371 ಅಂಶ ಹೆಚ್ಚಾಗಿದ್ದು, 39,140 ಅಂಶಗಳಿಗೆ ತಲುಪಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 109 ಅಂಶ ಹೆಚ್ಚಾಗಿ 11,856 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ.

2018–19ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕವು ಷೇರುಪೇಟೆಗಳಲ್ಲಿ ಸಕಾರಾತ್ಮಕ ಚಲನೆಗೆ ಕಾರಣವಾಗಿದೆ.ಉತ್ತಮ ಫಲಿತಾಂಶ ಪ್ರಕಟಿಸಿರುವ ಟಿಸಿಎಸ್, ಸೋಮವಾರ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿತು.

ಎಫ್‌ಪಿಐ ಹೂಡಿಕೆ
ವಿದೇಶಿ ಸಾಂಸ್ಥಿಕ ಹೂಡಿಕೆ ದಾರರು (ಎಫ್‌ಪಿಐ) ವಾರದ ವಹಿವಾಟಿನಲ್ಲಿ ₹ 2,789 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.