ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ: ಮುಂದುವರಿದ ಗೂಳಿಯ ಓಟ

Last Updated 12 ಜನವರಿ 2021, 14:18 IST
ಅಕ್ಷರ ಗಾತ್ರ

ಮುಂಬೈ: ಭಾರತದ ಷೇರು ಮಾರುಕಟ್ಟೆಗಳು ಮಂಗಳವಾರದ ವಹಿವಾಟಿನಲ್ಲಿ ಮತ್ತೆ ದಾಖಲೆಯ ಎತ್ತರವನ್ನು ತಲುಪಿದವು. ವಿದೇಶಿ ಹೂಡಿಕೆದಾರರ ಕಡೆಯಿಂದ ಹಣದ ಹರಿವು ಇತ್ತು. ಸೆನ್ಸೆಕ್ಸ್ 247 ಅಂಶಗಳ ಏರಿಕೆ ದಾಖಲಿಸಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ದಿನದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 49,569ಕ್ಕೆ ತಲುಪಿತ್ತು. ದಿನದ ಅಂತ್ಯಕ್ಕೆ 49,517ರಲ್ಲಿ ವಹಿವಾಟು ಕೊನೆಗೊಳಿಸಿತು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಗಳ ಖರೀದಿ ಮಾರುಕಟ್ಟೆಯಲ್ಲಿ ಜೋರಾಗಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 78 ಅಂಶಗಳ ಏರಿಕೆ ದಾಖಲಿಸಿತು. ಹೊಸ ದಾಖಲೆಯಾದ 14,563 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಸೆನ್ಸೆಕ್ಸ್‌ನಲ್ಲಿ ಎಸ್‌ಬಿಐ ಷೇರುಗಳು ಅತಿಹೆಚ್ಚಿನ ಪ್ರಮಾಣದಲ್ಲಿ ಮೌಲ್ಯ ಹೆಚ್ಚಿಸಿಕೊಂಡವು. ನಂತರದ ಸ್ಥಾನದಲ್ಲಿ ಭಾರ್ತಿ ಏರ್‌ಟೆಲ್‌, ರಿಲಯನ್ಸ್ ಇಂಡಸ್ಟ್ರೀಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಟಿಸಿ, ಎಕ್ಸಿಸ್ ಬ್ಯಾಂಕ್‌ ಮತ್ತು ಎನ್‌ಟಿಪಿಸಿ ಷೇರುಗಳು ಇದ್ದವು.

ಏಷ್ಯನ್ ಪೇಂಟ್ಸ್, ಎಚ್‌ಯುಎಲ್‌, ನೆಸ್ಲೆ ಇಂಡಿಯಾ, ಟೈಟಾನ್, ಕೋಟಕ್ ಬ್ಯಾಂಕ್ ಮತ್ತು ಸನ್ ಫಾರ್ಮಾ ಷೇರುಗಳ ಮೌಲ್ಯದಲ್ಲಿ ಇಳಿಕೆ ಕಂಡುಬಂತು. ‘2021ರಲ್ಲಿ ಎನ್‌ಪಿಎ ಪ್ರಮಾಣ ಹೆಚ್ಚಬಹುದು ಎಂದು ಆರ್‌ಬಿಐ ಎಚ್ಚರಿಸಿದ್ದರೂ, ಮಾರುಕಟ್ಟೆಯ ಓಟ ಮುಂದುವರಿದಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ಹೂಡಿಕೆ ಮುಂದುವರಿದಿದೆ’ ಎಂದು ಜಿಯೋಜಿತ್ ಹಣಕಾಸು ಸೇವೆಗಳ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದ್ದಾರೆ.

ಶಾಂಘೈ, ಹಾಂಗ್‌ಕಾಂಗ್‌ ಮತ್ತು ಟೋಕಿಯೊ ಷೇರು ಮಾರುಕಟ್ಟೆಗಳು ಏರಿಕೆ ಕಂಡಿವೆ. ಸೋಲ್‌ನ ಷೇರು ಮಾರುಕಟ್ಟೆ ಕುಸಿತ ದಾಖಲಿಸಿದೆ. ಬ್ರೆಂಟ್ ಕಚ್ಚಾ ತೈಲದಲ್ಲಿ ಶೇಕಡ 1.6ರಷ್ಟು ಏರಿಕೆ ಆಗಿದೆ. ಇದು ಪ್ರತಿ ಬ್ಯಾರಲ್‌ಗೆ 56.55 ಡಾಲರ್‌ನಂತೆ ಮಾರಾಟವಾಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ 15 ಪೈಸೆಯಷ್ಟು ಚೇತರಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT