ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಕೊನೆಯ ವಹಿವಾಟಿನ ದಿನವಾದ ಸೋಮವಾರವೂ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮಹಾವೀರ ಜಯಂತಿ ಅಂಗವಾಗಿ ಮಂಗಳವಾರ ಷೇರುಪೇಟೆಗೆ ರಜೆ ಇರಲಿದೆ.

ಪಶ್ಚಿಮ ಏಷ್ಯಾದ ಸಂಘರ್ಷ, ಕಚ್ಚಾ ತೈಲದ ಬೆಲೆ ಏರಿಕೆ, ಏಷ್ಯಾದ ಮಾರುಕಟ್ಟೆಗಳು ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯ ಕಂಡಿರುವುದು ಮತ್ತು ವಿದೇಶಿ ಬಂಡವಾಳದ ಹೊರಹರಿವು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಇವು ದೇಶದ ಸೂಚ್ಯಂಕಗಳ ಇಳಿಕೆಗೆ ಕಾರಣವಾಗಿವೆ ಎಂದು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,635 ಅಂಶ (ಶೇ 2.22ರಷ್ಟು) ಇಳಿಕೆಯಾಗಿ, 71,947ಕ್ಕೆ ವಹಿವಾಟು ಅಂತ್ಯಗೊಂಡಿದೆ. ದಿನದ ವಹಿವಾಟಿನಲ್ಲಿ 1,809 ಅಂಶ ಕುಸಿತವಾಗಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 488 ಅಂಶ (ಶೇ 2.14ರಷ್ಟು) ಕಡಿಮೆಯಾಗಿ, 22,331ಕ್ಕೆ ಕೊನೆಗೊಂಡಿದೆ.

ಹಿಂದಿನ ವಹಿವಾಟಿನ ದಿನದಲ್ಲೂ (ಶುಕ್ರವಾರ) ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿದ್ದವು. ಎರಡು ದಿನದ ವಹಿವಾಟಿನಲ್ಲಿ ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ₹18.60 ಲಕ್ಷ ಕೋಟಿ ಕರಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 2.18ರಷ್ಟು ಏರಿಕೆಯಾಗಿದೆ. ಪ್ರತಿ ಬ್ಯಾರಲ್ ಬೆಲೆಯು 115.1 ಡಾಲರ್ ಆಗಿದೆ.

ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್, ಹಾಂಗ್ ಕಾಂಗ್ ಇಳಿಕೆ ಕಂಡಿದ್ದರೆ, ಶಾಂಘೈ ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.