ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಸತತ ಐದನೇ ವಹಿವಾಟಿನ ದಿನವಾದ ಶುಕ್ರವಾರವೂ ಇಳಿಕೆ ಕಂಡಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 604 ಅಂಶ ಇಳಿಕೆಯಾಗಿ, 83,576ಕ್ಕೆ ವಹಿವಾಟು ಕೊನೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 193 ಅಂಶ ಕಡಿಮೆಯಾಗಿ, 25,683ಕ್ಕೆ ಅಂತ್ಯಗೊಂಡಿದೆ.

ಸತತ ಐದು ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 2,185 ಅಂಶ ಮತ್ತು ನಿಫ್ಟಿ 645 ಅಂಶ ಕುಸಿದಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹3,367 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರೆ, ದೇಶೀ ಹೂಡಿಕೆದಾರರು ₹3,701 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು, ಅಮೆರಿಕದ ವ್ಯಾಪಾರ ನೀತಿಯ ಸುತ್ತಲಿನ ಅನಿಶ್ಚಿತತೆ, ಕಚ್ಚಾ ತೈಲದ ಬೆಲೆ ಹೆಚ್ಚಳ, ವಿದೇಶಿ ಬಂಡವಾಳದ ಹೊರಹರಿವು, ರೂಪಾಯಿ ಮೌಲ್ಯ ಇಳಿಕೆಯು ಹೂಡಿಕೆದಾರರ ಮೇಲೆ ಪರಿಣಾಮ ಬೀರಿತು. ಇದು ದೇಶದ ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.18ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರಲ್ ದರವು 62.10 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.