ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೇತರಿಕೆ ಹಾದಿಗೆ ಷೇರುಪೇಟೆ ವಹಿವಾಟು

Last Updated 18 ಮೇ 2019, 20:00 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಹಿವಾಟುಎರಡು ವಾರಗಳ ಬಳಿಕ ಸಕಾರಾತ್ಮಕ ಹಾದಿಗೆ ಮರಳಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ವಾರದ ವಹಿವಾಟಿನಲ್ಲಿ 468 ಅಂಶ ಏರಿಕೆ ಕಂಡು 37,930 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.ಐದು ದಿನಗಳ ವಹಿವಾಟಿನಲ್ಲಿ ಎರಡು ದಿನಗಳಲ್ಲಿ ವಹಿವಾಟಿನಲ್ಲಿ ಇಳಿಕೆ ಕಂಡಿದೆ.

ಮೇ ತಿಂಗಳ ಮೂರು ವಾರಗಳ ವಹಿವಾಟಿನಲ್ಲಿ, ಹೂಡಿಕೆದಾರರ ಸಂಪತ್ತು ಮೌಲ್ಯ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ₹ 7 ಲಕ್ಷ ಕೋಟಿಗಳಷ್ಟು ಕರಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 153.58 ಲಕ್ಷ ಕೋಟಿಗಳಿಂದ ₹ 146.58 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 128 ಅಂಶ ಹೆಚ್ಚಾಗಿ 11,407 ಅಂಶಗಳಿಗೆ ತಲುಪಿದೆ.

ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರವು ಭಾರತವನ್ನೂ ಒಳಗೊಂಡು ಜಾಗತಿಕ ಮಾರುಕಟ್ಟೆಯಲ್ಲಿ ವಹಿವಾಟನ್ನು ಚಂಚಲಗೊಳಿಸಿದೆ.

ಸ್ಥಿರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಇದು ಹೂಡಿಕೆದಾರರಲ್ಲಿ ಸಕಾರಾತ್ಮಕ ಸ್ಪಂದನೆಯನ್ನು ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಎಫ್‌ಪಿಐ ಹೊರಹರಿವು: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಪಿಐ) ಮೇ ತಿಂಗಳಿನಲ್ಲಿ ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದಾರೆ. ವಾರದ ವಹಿವಾಟಿನಲ್ಲಿ ₹ 6,221 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT