ಗುರುವಾರ , ನವೆಂಬರ್ 14, 2019
19 °C
ಬಿಎಸ್‌ಇ 1,171 ಅಂಶ, ನಿಫ್ಟಿ 357 ಅಂಶ ಏರಿಕೆ

ಉತ್ತಮ ಗಳಿಕೆಯ ವಾರ

Published:
Updated:
Prajavani

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಉತ್ತಮ ಗಳಿಕೆಯೊಂದಿಗೆ ಅಂತ್ಯವಾಗಿವೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 1,171 ಅಂಶಗಳ ಜಿಗಿತ ಕಂಡು 39,298 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 357 ಅಂಶ ಹೆಚ್ಚಾಗಿ 11,661 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಸಕಾರಾತ್ಮಕ ಅಂಶಗಳು: ಆರ್ಥಿಕತೆಗೆ ಉತ್ತೇಜನ ನೀಡಲು ಇನ್ನಷ್ಟು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಇದು ಷೇರುಪೇಟೆಗಳಲ್ಲಿ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ವಿದೇಶಿ ಬಂಡವಾಳ ಹೂಡಿಕೆದಾರರು ಷೇರುಗಳ ಖರೀದಿಗೆ ಹೆಚ್ಚಿನ ಗಮನ ನೀಡಿದ್ದಾರೆ. ಇದು ಖರೀದಿ ಚಟುವಟಿಕೆಯನ್ನು ಹೆಚ್ಚಿಸಿದೆ.

 

ಸಂಪತ್ತು ವೃದ್ಧಿ
ಷೇರುಪೇಟೆಯಲ್ಲಿ ನಡೆಯುತ್ತಿರುವ ಸಕಾರಾತ್ಮಕ ವಹಿವಾಟಿನಿಂದಾಗಿ ಹೂಡಿಕೆದಾರರ ಸಂಪತ್ತು ಮೌಲ್ಯದಲ್ಲಿಯೂ ಏರಿಕೆ ಆಗುತ್ತಿದೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಒಂದು ವಾರದ ವಹಿವಾಟಿನಲ್ಲಿ ₹ 6.8 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 143.18 ಲಕ್ಷ ಕೋಟಿಗಳಿಂದ ₹ 149.58 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ಪ್ರತಿಕ್ರಿಯಿಸಿ (+)