ಮುಂಬೈ: ಪಶ್ಚಿಮ ಏಷ್ಯಾದಲ್ಲಿನ ಸಮರವು ತೀವ್ರ ಸ್ವರೂಪ ಪಡೆದುಕೊಂಡಿರುವುದು ಹಾಗೂ ಕಚ್ಚಾ ತೈಲದ ಬೆಲೆಯು ಭಾರಿ ಏರಿಕೆ ಕಂಡಿರುವ ಕಾರಣದಿಂದಾಗಿ ಹೂಡಿಕೆದಾರರು ಷೇರುಗಳ ಖರೀದಿಗೆ ಹಿಂದೇಟು ಹಾಕಿದರು. ಷೇರುಗಳ ಮಾರಾಟಕ್ಕೆ ಹೆಚ್ಚು ಒತ್ತು ನೀಡಿದರು. ಇದರಿಂದಾಗಿ ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ 1ಕ್ಕಿಂತ ಹೆಚ್ಚು ಕುಸಿದವು.

ಜಾಗತಿಕ ಷೇರುಪೇಟೆಗಳಲ್ಲಿನ ನಿರಾಶಾದಾಯಕ ವಹಿವಾಟು ಹಾಗೂ ವಿದೇಶಿ ಹೂಡಿಕೆಯ ಹೊರಹರಿವು ಕೂಡ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದವು ಎಂದು ವರ್ತಕರು ತಿಳಿಸಿದ್ದಾರೆ.

ಷೇರುಪೇಟೆ ಸೂಚ್ಯಂಕಗಳ ಕುಸಿತದ ಪರಿಣಾಮವಾಗಿ ಹೂಡಿಕೆದಾರರ ಸಂಪತ್ತು ಒಂದು ದಿನದಲ್ಲಿ ₹6.59 ಲಕ್ಷ ಕೋಟಿಯಷ್ಟು ಕಡಿಮೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 7.29ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್ಗೆ 77.85 ಡಾಲರ್ಗೆ ತಲುಪಿದೆ.

ಸೋಮವಾರದ ವಹಿವಾಟಿನ ಆರಂಭದಲ್ಲಿ ಮುಂಬೈ ಷೇರುಪೇಟೆ (ಬಿಎಸ್ಇ) ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 2,743 ಅಂಶದವರೆಗೆ ಕುಸಿದಿತ್ತು. ನಂತರ, 1,048 ಅಂಶ ಕುಸಿತದೊಂದಿಗೆ ವಹಿವಾಟನ್ನು ಕೊನೆಗೊಳಿಸಿತು.

ರಾಷ್ಟ್ರೀಯ ಷೇರುಪೇಟೆಯ (ಎನ್ಎಸ್ಇ) ಸಂವೇದಿ ಸೂಚ್ಯಂಕ ನಿಫ್ಟಿ ಕೂಡ 312 ಅಂಶ ಕುಸಿತದೊಂದಿಗೆ ವಹಿವಾಟು ಕೊನೆಗೊಳಿಸಿತು. ವಹಿವಾಟಿನ ನಡುವಿನಲ್ಲಿ ಇದು 575 ಅಂಶದವರೆಗೆ ಕುಸಿದಿತ್ತು.

ಸೇವಾ ವಲಯ, ಗ್ರಾಹಕ ಬಳಕೆಯ ವಿವಿಧ ಉಪಕರಣಗಳ ವಲಯ, ವಾಹನ, ತೈಲ ಮತ್ತು ಅನಿಲ, ಕೈಗಾರಿಕೆಗಳು, ಇಂಧನ ವಲಯದ ಷೇರುಗಳ ಮೌಲ್ಯ ಕುಸಿದಿದೆ.

‘ಪಶ್ಚಿಮ ಏಷ್ಯಾದ ಬಿಕ್ಕಟ್ಟು ಜಾಗತಿಕ ಬಂಡವಾಳ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಮೂಡಿಸಿದೆ’ ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ಸ್ ಲಿಮಿಟೆಡ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.