ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಬಾಕಿ ₹ 2,400 ಕೋಟಿ

Last Updated 25 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ : ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾಗಿರುವ ಬಾಕಿ ಮೊತ್ತ ₹2,400 ಕೋಟಿಗಳಷ್ಟಿದೆ ಎಂದು ಕೇಂದ್ರ ಆಹಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017–18 ಮತ್ತು 2018–19ರಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದ್ದರಿಂದ ಬೆಲೆಯಲ್ಲಿ ಇಳಿಕೆ ಆಗಿದೆ. ಇದರಿಂದಾಗಿ ಸಕ್ಕರೆ ಕಾರ್ಯಾನೆಗಳು ನಗದು ಬಿಕ್ಕಟ್ಟು ಎದುರಿಸುವಂತಾಗಿದೆ. ಬೆಳೆಗಾರರಿಗೆ ಬಾಕಿ ಪಾವತಿಸುವಂತೆ ಮಾಡಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ವಿವಿಧ ಯೋಜನೆಗಳಡಿ ಸಕ್ಕರೆ ಕಾರ್ಖಾನೆಗಳಿಗೆ ₹ 1,574 ಕೋಟಿ ನೀಡಲಾಗಿದೆ.

ಪಾವತಿ ವಿವರ (ಕೋಟಿಗಳಲ್ಲಿ)

ವರ್ಷ;ಪಾವತಿ;ಬಾಕಿ

2018–19;₹ 84,700;₹2,300

2017–18;₹ 84,900;₹ 1,000

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT