ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ರಫ್ತು 90 ಲಕ್ಷ ಟನ್‌ಗೆ ತಲುಪುವ ನಿರೀಕ್ಷೆ

Last Updated 18 ಏಪ್ರಿಲ್ 2022, 14:37 IST
ಅಕ್ಷರ ಗಾತ್ರ

ನವದೆಹಲಿ: ಸಕ್ಕರೆ ರಫ್ತು ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ 90 ಲಕ್ಷ ಟನ್‌ಗೆ ಏರಿಕೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ (ಐಎಸ್‌ಎಂಎ) ಹೇಳಿದೆ.

ಭಾರತದ ಸಕ್ಕರೆಗೆ ಬಾಂಗ್ಲಾದೇಶ ಮತ್ತು ಇಂಡೋನೇಷ್ಯಾದಿಂದ ಉತ್ತಮ ಬೇಡಿಕೆ ಬಂದಿರುವುದೇ ಇದಕ್ಕೆ ಕಾರಣ ಎಂದು ತಿಳಿಸಿದೆ. ಸಕ್ಕರೆ ಮಾರುಕಟ್ಟೆಯು ಅಕ್ಟೋಬರ್‌ನಿಂದ ಸೆಪ್ಟೆಂಬರ್‌ ಅವಧಿಯವರೆಗೆ ಇರುತ್ತದೆ.

ಮಾರುಕಟ್ಟೆ ವರದಿ ಮತ್ತು ಬಂದರು ಮಾಹಿತಿಯ ಪ್ರಕಾರ, ಸಕ್ಕರೆ ಕಾರ್ಖಾನೆಗಳು ಸದ್ಯ 80 ಲಕ್ಷ ಟನ್‌ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿವೆ. ಇದರಲ್ಲಿ 57.17 ಲಕ್ಷ ಟನ್‌ಗಳಷ್ಟನ್ನು 2021ರ ಅಕ್ಟೋಬರ್‌ನಿಂದ 2022ರ ಮಾರ್ಚ್‌ ಅವಧಿಯಲ್ಲಿ ರಫ್ತು ಮಾಡಲಾಗಿದೆ. ಹಿಂದಿನ ಬಾರಿ ಇದೇ ಅವಧಿಯಲ್ಲಿ 31.85 ಲಕ್ಷ ಟನ್‌ ಸಕ್ಕರೆ ರಫ್ತು ಮಾಡಲಾಗಿತ್ತು ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್‌ನಲ್ಲಿ 7 ಲಕ್ಷದಿಂದ 8 ಲಕ್ಷ ಟನ್‌ನಷ್ಟು ಸಕ್ಕರೆ ರಫ್ತಾಗಲಿದೆ. 2021–22ನೇ ಮಾರುಕಟ್ಟೆ ವರ್ಷದಲ್ಲಿ 350 ಲಕ್ಷ ಟನ್‌ ಸಕ್ಕರೆ ಉತ್ಪಾದನೆ ಆಗಲಿದೆ ಎಂದು ಹೇಳಿದೆ. ದೇಶಿ ಬೇಡಿಕೆಯು 272 ಲಕ್ಷ ಟನ್‌ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT