ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಉತ್ಪಾದನೆ ಶೇ 25ರಷ್ಟು ಹೆಚ್ಚಳ

Last Updated 2 ಫೆಬ್ರುವರಿ 2021, 14:06 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಮಾರುಕಟ್ಟೆ ವರ್ಷದ ನಾಲ್ಕು ತಿಂಗಳಲ್ಲಿ (ಅಕ್ಟೋಬರ್‌–ಜನವರಿ) 1.76 ಕೋಟಿ ಟನ್‌ ಸಕ್ಕರೆ ಉತ್ಪಾದಿಸಿವೆ.

ಹಿಂದಿನ ಮಾರುಕಟ್ಟೆ ವರ್ಷದ ಇದೇ ಅವಧಿಯಲ್ಲಿ 1.41 ಕೋಟಿ ಟನ್‌ ಸಕ್ಕರೆ ಉತ್ಪಾದನೆ ಆಗಿತ್ತು. ಈ ಬಾರಿ ಶೇ 25.37ರಷ್ಟು ಹೆಚ್ಚು ಉತ್ಪಾದನೆ ಆಗಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ (ಐಎಸ್‌ಎಂಎ) ಮಾಹಿತಿ ನೀಡಿದೆ.

2019–20ನೇ ಮಾರುಕಟ್ಟೆ ವರ್ಷದಲ್ಲಿ 2.74 ಕೋಟಿ ಟನ್‌ ಸಕ್ಕರೆ ಉತ್ಪಾದನೆ ಆಗಿತ್ತು. 2020–21ರಲ್ಲಿ 3.02 ಕೋಟಿ ಟನ್‌ಗಳಷ್ಟು ಉತ್ಪಾದನೆ ಆಗಲಿದೆ ಎಂದು ಐಎಸ್‌ಎಂಎ ಹೇಳಿದೆ.

ದೇಶದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ಜನವರಿಯಲ್ಲಿ 54.4 ಲಕ್ಷ ಟನ್‌ ಸಕ್ಕರೆ ಉತ್ಪಾದನೆ ಆಗಿದೆ. 2020ರ ಜನವರಿಯಲ್ಲಿ 54.9 ಲಕ್ಷ ಟನ್‌ಗಳಷ್ಟು ಇತ್ತು. ಎರಡನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಸಕ್ಕರೆ ಉತ್ಪಾದನೆ 34.6 ಲಕ್ಷ ಟನ್‌ಗಳಿಂದ 63.8 ಲಕ್ಷ ಟನ್‌ಗಳಿಗೆ ಏರಿಕೆಯಾಗಿದೆ.

ಮೂರನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಉತ್ಪಾದನೆ 27.9 ಲಕ್ಷ ಟನ್‌ಗಳಿಂದ 34.3 ಲಕ್ಷ ಟನ್‌ಗಳಿಗೆ ಏರಿಕೆಯಾಗಿದೆ.

ಉದ್ಯಮ ಮತ್ತು ಕಬ್ಬು ಬೆಳೆಗಾರರಿಗೆ ಹಣಕಾಸಿನ ನೆರವು ನೀಡುವ ದೃಷ್ಟಿಯಿಂದ ಸರ್ಕಾರವು ಬಜೆಟ್‌ನಲ್ಲಿ ತೆಗೆದುಕೊಂಡಿರುವ ಕ್ರಮಗಳನ್ನು ಸಂಘವು ಸ್ವಾಗತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT