ಶುಕ್ರವಾರ, ಏಪ್ರಿಲ್ 16, 2021
31 °C

ಸಕ್ಕರೆ ಉತ್ಪಾದನೆ ಶೇ 20ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2020–21ನೇ ಮಾರುಕಟ್ಟೆ ವರ್ಷದ ಮೊದಲ ಐದು ತಿಂಗಳಿನಲ್ಲಿ ಸಕ್ಕರೆ ಉತ್ಪಾದನೆ ಶೇಕಡ 20ರಷ್ಟು ಹೆಚ್ಚಾಗಿ 233.77 ಲಕ್ಷ ಟನ್‌ಗಳಿಗೆ ಏರಿಕೆಯಾಗಿದೆ.

ಕಬ್ಬು ಉತ್ಪಾದನೆ ಹೆಚ್ಚಾಗಿರುವುದರಿಂದ ಸಕ್ಕರೆ ಉತ್ಪಾದನೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಸಂಘ (ಐಎಸ್‌ಎಂಎ) ತಿಳಿಸಿದೆ.

2019–20ನೇ ಮಾರುಕಟ್ಟೆ ವರ್ಷದ ಐದು ತಿಂಗಳಿನಲ್ಲಿ 194.82 ಲಕ್ಷ ಟನ್‌ ಸಕ್ಕರೆ ಉತ್ಪಾದನೆ ಆಗಿತ್ತು.

ಸಕ್ಕರೆ ಕಾರ್ಖಾನೆಗಳಲ್ಲಿನ ನಗದು ಲಭ್ಯತೆ ಸ್ಥಿತಿ ಹೆಚ್ಚಿಸಲು ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸುವಂತೆ ಸರ್ಕಾರಕ್ಕೆ ಬೇಡಿಕೆಯನ್ನೂ ಇಟ್ಟಿದೆ.

ಸಕ್ಕರೆಯ ಎಂಎಸ್‌ಪಿಯನ್ನು ಸದ್ಯ ಒಂದು ಕೆ.ಜಿ.ಗೆ ಇರುವ ₹ 31ರಿಂದ ₹ 34.5ಕ್ಕೆ ಹೆಚ್ಚಿಸುವಂತೆ ಕೇಳಿದೆ. ಇದರಿಂದಾಗಿ ಕಬ್ಬು ಬೆಳೆಗಾರರಿಗೆ ಬಾಕಿ ನೀಡಲು ಕಾರ್ಖಾನೆಗಳಿಗೆ ನೆರವಾಗಲಿದೆ ಎಂದು ಸಂಘವು ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು