ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಉತ್ಪಾದನೆ ಇಳಿಕೆ

ಪ್ರಮುಖ ರಾಜ್ಯಗಳಲ್ಲಿ ಕಬ್ಬು ಅರೆಯುವಿಕೆ ವಿಳಂಬ
Last Updated 19 ನವೆಂಬರ್ 2018, 18:35 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ ನವೆಂಬರ್‌ 15ರವರೆಗೆ ಸಕ್ಕರೆ ಉತ್ಪಾದನೆ ಶೇ 15 ರಷ್ಟು ಇಳಿಕೆಯಾಗಿದ್ದು, 11.6 ಲಕ್ಷ ಟನ್‌ಗೆ ತಲುಪಿದೆ ಎಂದು ಭಾರತೀಯಕ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (ಐಎಸ್‌ಎಂಎ) ಮಾಹಿತಿ ನೀಡಿದೆ.

2017ರ ನವೆಂಬರ್‌ 15ರ ವೇಳೆಗೆ13.7 ಲಕ್ಷ ಟನ್‌ ಸಕ್ಕರೆ ಉತ್ಪಾದನೆ ಆಗಿತ್ತು.ಬಹಳಷ್ಟು ಕಾರ್ಖಾ
ನೆಗಳಲ್ಲಿ ಕಬ್ಬು ಅರೆಯುವಿಕೆ ಆರಂಭವಾಗಿಲ್ಲ. ಹೀಗಾಗಿ ಉತ್ಪಾದನೆಯಲ್ಲಿ ಇಳಿಕೆಯಾಗಿದೆ.

ಅತಿ ಹೆಚ್ಚು ಕಬ್ಬು ಬೆಳೆಯುವ ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಈ ಬಾರಿ ಕಬ್ಬು ಇಳುವರಿ ತಗ್ಗುವ ಅಂದಾಜು ಮಾಡಲಾಗಿದೆ. ಇದರಿಂದಾಗಿ ಒಟ್ಟಾರೆ ಉತ್ಪಾದನೆಯೂ ಇಳಿಕೆಯಾಗಲಿದೆ.

ತಡವಾಗಿ ಕಬ್ಬು ಅರೆಯುವಿಕೆ ಆರಂಭವಾಗಿದೆ. ಇದು ಕೂಡ ಉತ್ಪಾದನೆ ಇಳಿಕೆಗೆ ಕಾರಣವಾಗಿದೆ. ಉತ್ತರಪ್ರದೇಶದಲ್ಲಿ ಸಕ್ಕರೆ ಉತ್ಪಾದನೆ 5.67 ಲಕ್ಷ ಟನ್‌ಗಳಿಂದ 1.76 ಲಕ್ಷ ಟನ್‌ಗಳಿಗೆ ಕುಸಿದಿದೆ. ಕರ್ನಾಟಕದಲ್ಲಿ ಸಹ 3.71 ಲಕ್ಷ ಟನ್‌ಗಳಿಂದ 1.85 ಲಕ್ಷ ಟನ್‌ಗಳಿಗೆ ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT