ನವದೆಹಲಿ: ಅಕ್ಟೋಬರ್ನಲ್ಲಿ ಪ್ರಾರಂಭವಾಗುವ 2026-27ರ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಬೆಲೆಯನ್ನು ಕ್ವಿಂಟಲ್ಗೆ ₹365ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬಿನ ನ್ಯಾಯಸಮ್ಮತ ಮತ್ತು ಲಾಭದಾಯಕ ದರದ (ಎಫ್ಆರ್ಪಿ) ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ಎಫ್ಆರ್ಪಿ ₹355 ಇತ್ತು.

‘ಶೇ 10.25ರ ಮೂಲ ಇಳುವರಿ ದರ ಆಧರಿಸಿ ಎಫ್ಆರ್ಪಿಯನ್ನು ಕ್ವಿಂಟಲ್ಗೆ ₹365 ನಿಗದಿಪಡಿಸಲಾಗಿದೆ. ಶೇ 10.25ಕ್ಕಿಂತ ಹೆಚ್ಚಿನ ಇಳುವರಿಯಲ್ಲಿ ಪ್ರತಿ ಶೇ 0.1 ರಷ್ಟು ಹೆಚ್ಚಳಕ್ಕೆ, ಎಫ್ಆರ್ಪಿ ಕ್ವಿಂಟಾಲ್ಗೆ ₹3.56ರಷ್ಟು ಜಾಸ್ತಿ ಆಗುತ್ತದೆ‘ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು.

ಎಫ್ಆರ್ಪಿ ಈಗ ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ 200.5 ಪ್ರತಿಶತದಷ್ಟಿದೆ. ಈ ಹೆಚ್ಚಳದಿಂದ 1 ಕೋಟಿ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳ ಆಧಾರದಲ್ಲಿ ಸರ್ಕಾರವು ಕಬ್ಬಿಗೆ ಎಫ್ಆರ್ಪಿ ನಿಗದಿ ಮಾಡುತ್ತದೆ. ಸಕ್ಕರೆ ಕಾರ್ಖಾನೆಗಳು ರೈತರಿಂದ ಎಫ್ಆರ್ಪಿ ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಗೆ ಕಬ್ಬನ್ನು ಖರೀದಿಸುವುದು ಕಡ್ಡಾಯ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1964248736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.