ನವದೆಹಲಿ: ಇ–ಕಾಮರ್ಸ್ ಕಂಪನಿಗಳಾದ ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ವಿರುದ್ಧ ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ತನಿಖೆ ನಡೆಸಲು ಮುಂದಾಗಿರುವುದಕ್ಕೆ ತಡೆಯೊಡ್ಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸ್ಪರ್ಧಾ ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ವಿರುದ್ಧ ಸಿಸಿಐ ತನಿಖೆ ಕೈಗೆತ್ತಿಕೊಂಡಿದೆ.

ತನಿಖೆಗೆ ಸಹಕರಿಸಲು ಕಂಪನಿಗಳಿಗೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಸ್ಪರ್ಧಾತ್ಮಕ ವಿರೋಧಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ –2020 ಅನ್ನು ಈ ಸಂಸ್ಥೆಗಳು ಉಲ್ಲಂಘಿಸುತ್ತಿವೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.