ಬುಧವಾರ, ಜನವರಿ 20, 2021
24 °C

ಇಂಧನದ ಎಕ್ಸೈಸ್‌ ಸುಂಕ ಇಳಿಕೆ: ಶೇ 69 ಮಂದಿ ಅಭಿಪ್ರಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಸರ್ಕಾರ ಇಳಿಕೆ ಮಾಡಬೇಕು ಎಂದು ಸಮೀಕ್ಷೆಯೊಂದರಲ್ಲಿ ಪಾಲ್ಗೊಂಡಿದ್ದ ಶೇಕಡ 69ರಷ್ಟು ಜನ ಅಭಿಪ್ರಾಯಪಟ್ಟಿದ್ದಾರೆ.

ಸೋಶಿಯಲ್‌ ಮೀಡಿಯಾ ಪ್ಲಾಟ್‌ಫಾರಂ ಲೋಕಲ್‌ ಸರ್ಕಲ್ಸ್‌ ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ದೇಶದ 201 ಜಿಲ್ಲೆಗಳ 9,326 ಜನರ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸಲಾಗಿದೆ. ಅಭಿಪ್ರಾಯ ನೀಡಿದವರಲ್ಲಿ ಶೇ 71ರಷ್ಟು ಪುರುಷರು ಹಾಗೂ ಶೇ 29ರಷ್ಟು ಮಹಿಳೆಯರು.

ಆರ್ಥಿಕತೆಯ ಮಂದಗತಿಯ ಬೆಳವಣಿಗೆ ಹಾಗೂ ಕೋವಿಡ್‌–19 ಸಾಂಕ್ರಾಮಿಕದಿಂದ ಆದಾಯ ನಷ್ಟ ಎದುರಿಸುತ್ತಿರುವ ಜನರಿಗೆ ಎಕ್ಸೈಸ್‌ ಸುಂಕ ಇಳಿಕೆಯಿಂದ ಅಲ್ಪ ಮಟ್ಟಿನ ನೆಮ್ಮದಿ ಸಿಗಲಿದೆ ಎಂದು ಜನ ಸಮೀಕ್ಷೆಯಲ್ಲಿ ಅಭಿಪ್ರಾಯ ತಿಳಿಸಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಶೇ 20ರಷ್ಟು ಅಥವಾ ₹ 6ರಷ್ಟು ಇಳಿಕೆ ಮಾಡಬೇಕು ಎಂದು ಬಹುತೇಕರು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ದೆಹಲಿಯಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರಿಗೆ ₹ 78ಕ್ಕೆ ಮತ್ತು ಡೀಸೆಲ್‌ ದರ ಪ್ರತಿ ಲೀಟರಿಗೆ ₹ 68ಕ್ಕೆ ಇಳಿಕೆ ಆಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು