ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕಿಂಗ್‌ ಕ್ಷೇತ್ರದ ಭವಿಷ್ಯದ ಮುನ್ನೋಟಕ್ಕೆ ಸಲಹೆ ಸಂಗ್ರಹ

Last Updated 23 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು:ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದಂತೆ ಬ್ಯಾಂಕಿಂಗ್‌ ಕ್ಷೇತ್ರದ ಭವಿಷ್ಯದ ಮುನ್ನೋಟ ಸಿದ್ಧಪಡಿಸಲು ಪ್ರಾದೇಶಿಕ ಮಟ್ಟದಲ್ಲಿ ಸಂಗ್ರಹಿಸಲಾದ ಸಲಹೆಗಳನ್ನು15 ರಾಷ್ಟ್ರೀಕೃತ ಬ್ಯಾಂಕ್‌ಗಳ 200 ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ಸಿಂಡಿಕೇಟ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.

ಹಣಕಾಸು, ಸಾಲ ಮತ್ತು ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಹಲವು ಸಲಹೆಗಳನ್ನು ವಿವಿಧ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರು ನೀಡಿದ್ದರು. ಇವುಗಳನ್ನು ರಾಜ್ಯಮಟ್ಟದ ವಿಚಾರಗೋಷ್ಠಿಯಲ್ಲಿ ಚರ್ಚಿಸಲಾಗಿದೆ.

ಇಲ್ಲಿನ ಸಲಹೆಗಳನ್ನುಪ್ರಧಾನಿ, ಹಣಕಾಸು ಸಚಿವರನ್ನು ಒಳಗೊಂಡ ರಾಷ್ಟ್ರಮಟ್ಟದ ವಿಚಾರಗೋಷ್ಠಿಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ದೇಶದ ಆರ್ಥಿಕತೆಯ ಗಾತ್ರ ಮುಂದಿನ ಐದು ವರ್ಷಗಳಲ್ಲಿ ₹ 350 ಲಕ್ಷ ಕೋಟಿಗೆ ಹೆಚ್ಚಿಸಲು ಎಲ್ಲ ಬ್ಯಾಂಕ್‌ಗಳು ನೆರವಾಗಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT