ಶುಕ್ರವಾರ, ಫೆಬ್ರವರಿ 28, 2020
19 °C

ಸಿಂಡಿಕೇಟ್‌ ಬ್ಯಾಂಕ್‌ ಲಾಭ ₹435 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಂಡಿಕೇಟ್‌ ಬ್ಯಾಂಕ್‌, ಡಿಸೆಂಬರ್‌ ತ್ರೈಮಾಸಿಕದಲ್ಲಿ ₹435 ಕೋಟಿ ನಿವ್ವಳ ಲಾಭ ಗಳಿಸಿದೆ.

‘ವರ್ಷದ ಹಿಂದಿನ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭವು ₹108 ಕೋಟಿಗಳಷ್ಟಿತ್ತು. ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಕಡಿಮೆಯಾಗಿರುವುದರಿಂದ ನಿವ್ವಳ ಲಾಭದಲ್ಲಿ ಹೆಚ್ಚಳ ಸಾಧ್ಯವಾಗಿದೆ’ ಎಂದು ಬ್ಯಾಂಕ್‌ನ ಸಿಇಒ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.

ಈ ಅವಧಿಯಲ್ಲಿನ ಬ್ಯಾಂಕ್‌ನ ಒಟ್ಟಾರೆ ವರಮಾನವು ವರ್ಷದ ಹಿಂದಿನ ₹6,077 ಕೋಟಿಗೆ ಹೋಲಿಸಿದರೆ ₹6,316 ಕೋಟಿಗೆ ಏರಿಕೆಯಾಗಿದೆ. ನಿವ್ವಳ ‘ಎನ್‌ಪಿಎ’ ಶೇ 6.75 ರಿಂದ ಶೇ 5.94ಕ್ಕೆ ಇಳಿದಿದೆ. ಭವಿಷ್ಯದ ವೆಚ್ಚಗಳಿಗಾಗಿ ಬ್ಯಾಂಕ್‌ ₹1,044 ಕೋಟಿ ತೆಗೆದು ಇರಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು