ನವದೆಹಲಿ: ಬೆಂಕಿಯ ಅವಘಡ ನಂತರ ಐಫೋನ್ 15 ಮತ್ತು ಐಫೋನ್ 16 ತಯಾರಿಕೆಯನ್ನು ನಿಲ್ಲಿಸಲಾಗಿದೆ. ಆದರೂ ಮುಂದಿನ ಮೂರು ತಿಂಗಳಿಗೆ ಸಾಕಾಗುವಷ್ಟು ದಾಸ್ತಾನು ಲಭ್ಯವಿದೆ. ಇದು ರಫ್ತು ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೂಲಗಳು ಸೋಮವಾರ ತಿಳಿಸಿವೆ.
ತಮಿಳುನಾಡಿನ ಹೊಸೂರು ಬಳಿಯ ಟಾಟಾ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಐ–ಫೋನ್ ಮೊಬೈಲ್ ಬಿಡಿ ಭಾಗ ಘಟಕದಲ್ಲಿ ಇತ್ತೀಚೆಗೆ ಬೆಂಕಿ ಅವಘಢ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಬಿಡಿ ಭಾಗಗಳು ಬೆಂಕಿಗೆ ಆಹುತಿಯಾಗಿದ್ದವು.
ಆ್ಯಪಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆಗಳನ್ನು ನಡೆಸಿದ್ದಾರೆ. ಟಾಟಾ ಎಲೆಕ್ಟ್ರಾನಿಕ್ಸ್ ಐಫೋನ್ ತಯಾರಿಕೆಯನ್ನು ಪುನರಾರಂಭಿಸಲು ಸಮಯವನ್ನು ನಿಗದಿಪಡಿಸಿಲ್ಲ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.
ಆದರೆ, ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಆ್ಯಪಲ್ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.