ಮಂಗಳವಾರ, ಸೆಪ್ಟೆಂಬರ್ 21, 2021
21 °C

ಟಾಟಾದಿಂದ 50 ವಾಣಿಜ್ಯ ವಾಹನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಹಿಂದಿನ ಹಣಕಾಸು ವರ್ಷದಂತೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿಯೂ 50 ಹೊಸ ವಾಣಿಜ್ಯ ವಾಹನಗಳನ್ನು ಬಿಡುಗಡೆ ಮಾಡಲಾಗುವುದು’ ಎಂದು ಟಾಟಾ ಮೋಟರ್ಸ್‌ ಕಂಪನಿಯು ಅಧ್ಯಕ್ಷ ಗಿರೀಶ್ ವಾಘ್‌ ತಿಳಿಸಿದ್ದಾರೆ.

‘ವಾಣಿಜ್ಯ ವಾಹನ ಮತ್ತು ಪ್ರಯಾಣಿಕ ವಾಹನ ವಿಭಾಗದಲ್ಲಿ ವೆಚ್ಚ ಉಳಿತಾಯ ಕ್ರಮಗಳಿಂದ 2017–18ರಲ್ಲಿ ₹ 1,900 ಕೋಟಿ ಉಳಿತಾಯವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿಯೂ ಇದೇ ರೀತಿ ಉಳಿತಾಯ ಮಾಡಲಾಗುವುದು.

‘ಹೊಸ ಉತ್ಪನ್ನಗಳನ್ನು ಪರಿಚಯಿಸಲು ದೀರ್ಘಾವಧಿ ಕಾರ್ಯತಂತ್ರ ರೂಪಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು