ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಾಟಾ ಮೋಟರ್ಸ್‌ ಲಾಭ ₹ 3,043 ಕೋಟಿ

Last Updated 25 ಜನವರಿ 2023, 19:01 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಮೋಟರ್ಸ್‌ ಕಂಪನಿಯು 2022ರ ಡಿ. 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 3,043 ಕೋಟಿ ನಿವ್ವಳ ಲಾಭ ಗಳಿಸಿದೆ. ಮಾರಾಟ ದಲ್ಲಿ ಹೆಚ್ಚಳ ಆಗಿರುವುದೇ ಲಾಭ ಗಳಿಸಲು ಕಾರಣ ಎಂದು ಕಂಪನಿ ತಿಳಿಸಿದೆ.

ಕಂಪನಿಯು ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 1,451 ಕೋಟಿ ನಿವ್ವಳ ನಷ್ಟ ಕಂಡಿತ್ತು. ಒಟ್ಟು ವರಮಾನವು ₹ 72,229 ಕೋಟಿಯಿಂದ ₹ 88,489 ಕೋಟಿಗೆ ಏರಿಕೆ ಆಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಜಾಗ್ವಾರ್‌ ಲ್ಯಾಂಡ್‌ ರೋವರ್‌ ವರಮಾನ ಶೇ 28ರಷ್ಟು ಹೆಚ್ಚಾಗಿದೆ ಎಂದು ಹೇಳಿದೆ. ಕಂಪನಿಯು 2 ವರ್ಷಗಳ ನಂತರದಲ್ಲಿ ತ್ರೈಮಾಸಿಕದ ಅವಧಿಯೊಂದರಲ್ಲಿ ಲಾಭ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT