ಶುಕ್ರವಾರ, ಡಿಸೆಂಬರ್ 2, 2022
19 °C

ಪ್ರಯಾಣಿಕ ವಾಹನ ಬೆಲೆ ಹೆಚ್ಚಿಸಿದ ಟಾಟಾ ಮೋಟರ್ಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಟಾಟಾ ಮೋಟರ್ಸ್‌ ಕಂಪನಿಯು ಸೋಮವಾರದಿಂದ ಜಾರಿಗೆ ಬರುವಂತೆ ಪ್ರಯಾಣಿಕ ವಾಹನಗಳ ಬೆಲೆಯನ್ನು ಅಲ್ಪ ಹೆಚ್ಚಳ ಮಾಡಿದೆ. ವಿವಿಧ ಮಾದರಿಗಳು ಮತ್ತು ಅವತರಣಿಕೆಗಳಿಗೆ ಅನುಗುಣವಾಗಿ ಸರಾಸರಿ ಬೆಲೆ ಏರಿಕೆಯು ಶೇ 0.9ರಷ್ಟು ಇರಲಿದೆ ಎಂದು ಹೇಳಿದೆ.

ತಯಾರಿಕಾ ವೆಚ್ಚದಲ್ಲಿ ಆಗುತ್ತಿರುವ ಹೆಚ್ಚಳದ ಒಂದಿಷ್ಟು ಭಾಗವನ್ನು ಮಾತ್ರವೇ ಅಲ್ಪ ಬೆಲೆ ಏರಿಕೆಯ ಮೂಲಕ ಗ್ರಾಹಕರಿಗೆ ವರ್ಗಾಯಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

ಕಂಪನಿಯು ಟಿಯಾಗೊ, ಪಂಚ್‌, ನೆಕ್ಸಾನ್‌, ಹ್ಯಾರಿಯರ್‌ ಮತ್ತು ಸಫಾರಿಯಂತಹ ಪ್ರಯಾಣಿಕ ವಾಹನಗಳನ್ನು ದೇಶದಲ್ಲಿ ಮಾರಾಟ ಮಾಡುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು