ಗುರುವಾರ , ಜುಲೈ 29, 2021
21 °C

ಟಾಟಾ ಮೋಟರ್ಸ್‌ನ ಎಲ್ಲ ಘಟಕಗಳ ಪುನರಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿರುವ ಎಲ್ಲಾ ತಯಾರಿಕಾ ಘಟಕಗಳೂ ಪುನರರಾಂಭ ಮಾಡಿವೆ ಎಂದು ಟಾಟಾ ಮೋಟರ್ಸ್‌ ಕಂಪನಿ ತಿಳಿಸಿದೆ.

ಲಾಕ್‌ಡೌನ್‌ನಿಂದಾಗಿ ಘಟಕಗಳನ್ನು ಮುಚ್ಚಲಾಗಿತ್ತು. ಇದೀಗ ಆರ್ಥಿಕತೆಯು ಅನ್‌ಲಾಕ್‌ ಆಗುತ್ತಿರುವುದರಿಂದ ಮತ್ತೆ ತಯಾರಿಕಾ ಚಟುವಟಿಕೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದೆ.

ಶೇ 59ರಷ್ಟು ಪ್ರಯಾಣಿಕ ವಾಹನಗಳ ಷೋರೂಂಗಳಲ್ಲಿ ಮತ್ತೆ ಕೆಲಸ ಆರಂಭವಾಗಿದೆ. ವಾಣಿಜ್ಯ ವಾಹನಗಳ ವಿಭಾಗದಲ್ಲಿ ಶೇ 90ರಷ್ಟು ಪೂರೈಕೆದಾರರು ಕಾರ್ಯಾಚರಣೆ ನಡೆಸಲು ಅನುಮತಿ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು