ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎಲ್‌ಆರ್‌ನಲ್ಲಿ ₹ 28,900 ಕೋಟಿ ಹೂಡಿಕೆ ಮಾಡಲಿರುವ ಟಾಟಾ ಮೋಟರ್‌ ಸಮೂಹ

Last Updated 31 ಜುಲೈ 2021, 12:34 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಮೋಟರ್ಸ್ ಸಮೂಹವು ಪ್ರಸಕ್ತ ಹಣಕಾಸು ವರ್ಷದಲ್ಲಿತನ್ನ ಅಂಗ ಸಂಸ್ಥೆ ಆಗಿರುವ ಜಾಗ್ವಾರ್‌ ಲ್ಯಾಂಡ್‌ ರೋವರ್‌ನಲ್ಲಿ (ಜೆಎಲ್‌ಆರ್‌) ₹ 28,900 ಕೋಟಿ ಹೂಡಿಕೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್‌. ಚಂದ್ರಶೇಖರನ್‌ ಹೇಳಿದ್ದಾರೆ.

ಕಂಪನಿಯು ತನ್ನ ವಿದ್ಯುತ್‌ ಚಾಲಿತ ವಾಹನಗಳ (ಇವಿ) ವಹಿವಾಟಿಗಾಗಿ ಪ್ರತ್ಯೇಕವಾಗಿ ಬಂಡವಾಳ ಸಂಗ್ರಹಿಸುವ ಯೋಜನೆಯನ್ನು ಕಂಪನಿ ಹೊಂದಿದೆ. ಕಂಪನಿಯ ಒಟ್ಟಾರೆ ಮಾರಾಟದಲ್ಲಿ ಸದ್ಯ ವಿದ್ಯುತ್‌ ಚಾಲಿತ ವಾಹನಗಳ ಮಾರಾಟದ ಪಾಲು ಶೇ 2ರಷ್ಟಿದೆ. ಮುಂದಿನ ದಿನಗಳಲ್ಲಿ ಈ ಪಾಲನ್ನು ಮಧ್ಯಮ ಮತ್ತು ದೀರ್ಘಾವಧಿಯಲ್ಲಿ ಮಾರಾಟದಿಂದ ಶೇ 25ರಷ್ಟು ಪಾಲು ಹೊಂದುವ ನಿರೀಕ್ಷೆಯನ್ನು ಕಂಪನಿ ಇಟ್ಟುಕೊಂಡಿದೆ. ವರ್ಚುವಲ್‌ ಮೂಲಕ ನಡೆದ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

2025ರ ಒಳಗಾಗಿ ಕನಿಷ್ಠ 10 ವಿದ್ಯುತ್‌ ಚಾಲಿತ ವಾಹನಗಳನ್ನು ಬಿಡುಗಡೆ ಮಾಡುತ್ತೇವೆ. ಕೈಗೆಟುಕುವ ಬೆಲೆಯ ವಿದ್ಯುತ್ ಚಾಲಿತ ವಾಹನಗಳನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್‌ ಕೇಂದ್ರಗಳ ಸ್ಥಾಪನೆಯ ಕುರಿತು ಮಾತನಾಡಿದ ಅವರು, ಈ ಕುರಿತು ಟಾಟಾ ಪವರ್‌ ಜೊತೆ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ. ಕನಿಷ್ಠ 25 ನಗರಗಳಿಗೆ ಚಾರ್ಜಿಂಗ್‌ ಕೇಂದ್ರಗಳನ್ನು ವಿಸ್ತರಿಸಲಾಗುವುದು. ಮುಂಬರುವ ವರ್ಷಗಳಲ್ಲಿ ಒಂದು ಸಾವಿರ ಚಾರ್ಜಿಂಗ್‌ ಕೇಂದ್ರಗಳನ್ನು ಹೊಂದುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT