ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾ ಪವರ್‌ಗೆ ₹1,046 ಕೋಟಿ ಲಾಭ

Published 8 ಮೇ 2024, 14:34 IST
Last Updated 8 ಮೇ 2024, 14:34 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಪವರ್‌ ಕಂಪನಿಯು, 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹1,046 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹939 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 11ರಷ್ಟು ಏರಿಕೆಯಾಗಿದೆ. ವರಮಾನವು ₹13,325 ಕೋಟಿಯಿಂದ ₹16,463 ಕೋಟಿಗೆ ಏರಿಕೆಯಾಗಿದೆ ಎಂದು ಕಂಪನಿಯು, ಷೇರುಪೇಟೆಗೆ ತಿಳಿಸಿದೆ.

2023-24ರ ಫೂರ್ಣ ಹಣಕಾಸು ವರ್ಷದಲ್ಲಿ ₹4,280 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹3,810 ಕೋಟಿ ಗಳಿಸಿತ್ತು. ವರಮಾನವು ₹56,547 ಕೋಟಿಯಿಂದ ₹63,272 ಕೋಟಿಗೆ ಏರಿಕೆಯಾಗಿದೆ. ಇದರಿಂದ ಕಂಪನಿಯ ಮಾರುಕಟ್ಟೆ ಮೌಲ್ಯ ₹1.4 ಲಕ್ಷ ಕೋಟಿ ದಾಟಿದೆ ಎಂದು ತಿಳಿಸಿದೆ.

ಶೇ 200ರಷ್ಟು ಲಾಭಾಂಶ: ಲಾಭದಲ್ಲಿ ಏರಿಕೆಯಾಗಿರುವುದರಿಂದ ಕಂಪನಿಯು ಶೇ 200ರಷ್ಟು ಲಾಭಾಂಶ ಘೋಷಿಸಿದೆ.

₹1 ಬೆಲೆಯ ಪ್ರತಿ ಈಕ್ವಿಟಿ ಷೇರಿಗೆ ₹2 (ಶೇ 200ರಷ್ಟು) ಅಂತಿಮ ಲಾಭಾಂಶ ನೀಡಲು ಆಡಳಿತ ಮಂಡಳಿಯು ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT