ನವದೆಹಲಿ: ತತ್ಕಾಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯ ದುರುಪಯೋಗ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಹೊಸ ನಿಯವನ್ನು ಜಾರಿಗೆ ತಂದಿದೆ. ಆ ಪ್ರಕಾರ, ಇನ್ನು ಮುಂದೆ, ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ಗೆ ಕಳುಹಿಸಲಾಗುವ ಒಟಿಪಿ(ಒನ್ ಟೈಮ್ ಪಾಸ್ವರ್ಡ್) ಹೇಳಿ, ಕೌಂಟರ್ನಿಂದ ಟಿಕೆಟ್ ಪಡೆಯಬೇಕು ಎಂದು ರೈಲ್ವೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘ಈ ಒಟಿಪಿ ಆಧಾರಿತ ತತ್ಕಾಲ್ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ನವೆಂಬರ್ 17ರಿಂದ ಆಯ್ದ 52 ರೈಲುಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಿ, ಪರಿಶೀಲಿಸಲಾಗಿದೆ. ತುರ್ತು ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಮತ್ತಷ್ಟು ಪ್ರಯಾಣಿಕಸ್ನೇಹಿ ಆಗಿಸಲು ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆಯನ್ನು ಎಲ್ಲ ರೈಲು ನಿಲ್ದಾಣಗಳಿಗೂ ಅನ್ವಯಿಸಲಾಗುವುದು’ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲ್ವೆ ಇಲಾಖೆ ಇದೇ ಅಕ್ಟೋಬರ್ 1ರಿಂದ ಐಆರ್ಸಿಟಿಸಿಯಲ್ಲಿ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿತ್ತು. ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನುಸುಧಾರಿಸುವ ಹಾಗೂ ಏಜೆಂಟರ ಹಾವಳಿ ತಪ್ಪಿಸುವ ಸಲುವಾಗಿ ಇಲಾಖೆ ಇಂಥ ಹಲವು ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.