ಶನಿವಾರ, ಮಾರ್ಚ್ 25, 2023
27 °C

ತೆರಿಗೆ ಸಂಗ್ರಹ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಕೇಂದ್ರದ ಒಟ್ಟು ತೆರಿಗೆ ಸಂಗ್ರಹವು ಹಿಂದಿನ ವರ್ಷದ ಎರಡನೆಯ ತ್ರೈಮಾಸಿಕಕ್ಕೆ ಹೋಲಿಸಿದರೆ, ಈ ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಶೇಕಡ 22.5ರಷ್ಟು ಕುಸಿದಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ಈ ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಸೆಪ್ಟೆಂಬರ್ 15ರವರೆಗಿನ ಅವಧಿ ಯಲ್ಲಿ ಒಟ್ಟು ₹ 2.53 ಲಕ್ಷ ಕೋಟಿ ತೆರಿಗೆ ಸಂಗ್ರಹ ಆಗಿದೆ. ಹಿಂದಿನ ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಸೆಪ್ಟೆಂಬರ್‌ 15ರವರೆಗೆ ಒಟ್ಟು ₹ 3.27 ಲಕ್ಷ ಕೋಟಿ ತೆರಿಗೆ ಸಂಗ್ರಹ ಆಗಿತ್ತು.

ಅಂಕಿ–ಅಂಶ ಪರಿಷ್ಕೃತಗೊಳ್ಳಬಹುದು ಎಂದು ಮೂಲಗಳು ಹೇಳಿವೆ. ಬೆಂಗಳೂರು ವಲಯದ ತೆರಿಗೆ ಸಂಗ್ರಹದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 9.9ರಷ್ಟು ಹೆಚ್ಚಳ ಕಂಡುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು