ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ತೆರಿಗೆ ಹಂಚಿಕೆಯ 14ನೇ ಕಂತನ್ನು ರಾಜ್ಯಗಳಿಗೆ ಶುಕ್ರವಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯಕ್ಕೆ ₹5,125 ಕೋಟಿ ಬಿಡುಗಡೆಯಾಗಿದೆ.
ಸಾಮಾನ್ಯವಾಗಿ ತಿಂಗಳಿಗೆ ರಾಜ್ಯಗಳಿಗೆ ₹70,159 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಈ ಸಲ ₹1,40,318 ಕೋಟಿ ಬಿಡುಗಡೆಗೊಳಿಸಲಾಗಿದೆ. ಇದು ರಾಜ್ಯಗಳ ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸಲು ರಾಜ್ಯಗಳ ಕೈಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಬದ್ಧತೆಗೆ ಅನುಗುಣವಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಉತ್ತರ ಪ್ರದೇಶಕ್ಕೆ ಗರಿಷ್ಠ 24,783 ಕೋಟಿ, ಬಿಹಾರಕ್ಕೆ 14,232 ಕೋಟಿ, ಪಶ್ಚಿಮ ಬಂಗಾಳಕ್ಕೆ ₹10,642 ಕೋಟಿ, ಮಧ್ಯಪ್ರದೇಶಕ್ಕೆ ₹11,108 ಕೋಟಿ ಬಿಡುಗಡೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.