ಶುಕ್ರವಾರ, ಸೆಪ್ಟೆಂಬರ್ 17, 2021
22 °C

₹10 ಲಕ್ಷ ಕೋಟಿ ದಾಟಿದ ಟಿಸಿಎಸ್‌ ಮಾರುಕಟ್ಟೆ ಬಂಡವಾಳ ಮೌಲ್ಯ

ಪಿಟಿಐ Updated:

ಅಕ್ಷರ ಗಾತ್ರ : | |

TCS

ನವದೆಹಲಿ: ₹10 ಲಕ್ಷ ಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ಭಾರತದ ಎರಡನೆಯ ಕಂಪನಿ ಎಂಬ ಹೆಗ್ಗಳಿಕೆಗೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸೋಮವಾರ ಪಾತ್ರವಾಯಿತು. ಇದಕ್ಕೂ ಮೊದಲು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್‌) ಈ ಹಿರಿಮೆಗೆ ಪಾತ್ರವಾಗಿತ್ತು.

ಷೇರು ಮಾರುಕಟ್ಟೆಯಲ್ಲಿ ಸೋಮವಾರದ ಬೆಳಗ್ಗಿನ ವಹಿವಾಟಿನಲ್ಲಿ ಟಿಸಿಎಸ್‌ ಷೇರುಗಳ ಮೌಲ್ಯವು ಶೇಕಡ 6ರಷ್ಟು ಹೆಚ್ಚಳ ಕಂಡಿತು. ಕಂಪನಿಯ ಷೇರುಗಳನ್ನು ಮರಳಿ ಖರೀದಿಸುವ ಪ್ರಸ್ತಾವವು ಟಿಸಿಎಸ್‌ ಆಡಳಿತ ಮಂಡಳಿಯ ಮುಂದಿದೆ ಎಂಬುದು ಈ ಹೆಚ್ಚಳಕ್ಕೆ ಒಂದು ಕಾರಣವಾಗಿತ್ತು ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ಷೇರು ಮೌಲ್ಯದಲ್ಲಿ ಆದ ಹೆಚ್ಚಳದ ಕಾರಣದಿಂದಾಗಿ ಕಂಪನಿಯ ಒಟ್ಟು ಮಾರುಕಟ್ಟೆ ಬಂಡವಾಳವು ₹ 10.03 ಲಕ್ಷ ಕೋಟಿಗೆ ಏರಿಕೆ ಕಂಡಿತು. ಹಿಂದಿನ ತಿಂಗಳಿನಲ್ಲಿ ಟಿಸಿಎಸ್ ಕಂಪನಿಯು ₹ 9 ಲಕ್ಷ ಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ದೇಶದ ಎರಡನೆಯ ಕಂಪನಿ ಎಂಬ ಹೆಗ್ಗಳಿಕೆ ಪಡೆದಿತ್ತು. ಟಿಸಿಎಸ್‌ ಈಗ ಮಾರುಕಟ್ಟೆ ಬಂಡವಾಳದ ಲೆಕ್ಕಾಚಾರದಲ್ಲಿ ದೇಶದ ಎರಡನೆಯ ಅತ್ಯಂತ ಮೌಲ್ಯಯುತ ಕಂಪನಿ ಕೂಡ ಹೌದು. ₹ 10 ಲಕ್ಷ ಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿದ ದೇಶದ ಮೊದಲ ಕಂಪನಿಯಾದ ಆರ್‌ಐಎಲ್‌ನ ಈಗಿನ ಮಾರುಕಟ್ಟೆ ಬಂಡವಾಳದ ಮೊತ್ತ ₹ 15.02 ಲಕ್ಷ ಕೋಟಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು