ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಸಿಎಸ್‌ ಲಾಭ ಶೇ 14.9ರಷ್ಟು ಹೆಚ್ಚಳ

Last Updated 12 ಏಪ್ರಿಲ್ 2021, 15:27 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಅತಿದೊಡ್ಡ ಸಾಫ್ಟ್‌ವೇರ್‌ ಸೇವಾ ಕಂಪನಿ ಆಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್) ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಒಟ್ಟು ₹ 9,246 ಕೋಟಿ ಲಾಭ ಗಳಿಸಿದೆ. ಇದು ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿ ಗಳಿಸಿದ್ದ ಲಾಭಕ್ಕೆ ಹೋಲಿಸಿದರೆ ಶೇಕಡ 14.9ರಷ್ಟು ಹೆಚ್ಚು.

ಹಿಂದಿನ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಕಂಪನಿಯು ₹ 8,049 ಕೋಟಿ ಲಾಭ ಗಳಿಸಿತ್ತು. 2021ರ ಮಾರ್ಚ್‌ ತ್ರೈಮಾಸಿಕದಲ್ಲಿ ಆದಾಯವು ಶೇ 9.4ರಷ್ಟು ಏರಿಕೆ ಕಂಡು, ₹ 43,705 ಕೋಟಿಗೆ ತಲುಪಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

‘ಹಿಂದಿನ ದಶಕದಲ್ಲಿ ನಾವು ಹೊಸ ಸಾಮರ್ಥ್ಯ ಬೆಳೆಸಿಕೊಳ್ಳಲು, ಸಂಶೋಧನೆ ಮತ್ತು ಹೊಸತನ್ನು ಅಭಿವೃದ್ಧಿಪಡಿಸುವಲ್ಲಿ ಮಾಡಿದ ಹೂಡಿಕೆಗಳು ಮುಂದಿನ ಅವಕಾಶಗಳನ್ನು ಬಾಚಿಕೊಳ್ಳಲು ನಮ್ಮನ್ನು ಸನ್ನದ್ಧವಾಗಿಸಿವೆ’ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರಾಜೇಶ್ ಗೋಪಿನಾಥನ್ ಹೇಳಿದ್ದಾರೆ.

ಕಂಪನಿಯ ಆಡಳಿತ ಮಂಡಳಿಯು ಪ್ರತಿ ಷೇರಿಗೆ ₹ 15ರಂತೆ ಅಂತಿಮ ಡಿವಿಡೆಂಡ್‌ ನೀಡುವ ಪ್ರಸ್ತಾವನೆ ಇರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT