ಮುಂಬೈ : ಪ್ರಸಕ್ತ ಆರ್ಥಿಕ ವರ್ಷದಲ್ಲಿ 25 ಸಾವಿರ ಹೊಸಬರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುವುದು ಎಂದು ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಹೇಳಿದೆ.

ಅಗತ್ಯವಿದ್ದಲ್ಲಿ ಮತ್ತಷ್ಟು ಜನರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕಂಪನಿಯ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ. ಕೃತಿವಾಸನ್ ಹೇಳಿದ್ದಾರೆ.

2025–26ರ ಆರ್ಥಿಕ ವರ್ಷದಲ್ಲಿ ಕಂಪನಿಯು 44 ಸಾವಿರ ಹೊಸಬರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿತ್ತು. ಕಳೆದ ಮೂರು ಆರ್ಥಿಕ ವರ್ಷಗಳಿಂದ ಕಂಪನಿಯು ವಾರ್ಷಿಕ 40 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹೊಸಬರನ್ನು ನೇಮಕ ಮಾಡಿಕೊಳ್ಳುತ್ತಿದೆ.

ಹೊಸಬರನ್ನು ನೇಮಕ ಮಾಡಿಕೊಳ್ಳುವಾಗ ಅವರಿಗೆ 9 ತಿಂಗಳ ತರಬೇತಿ ನೀಡಲಾಗುತ್ತದೆ. ವ್ಯವಹಾರದ ಅಗತ್ಯಕ್ಕೆ ಅನುಗುಣವಾಗಿ ನೇಮಕದ ಪ್ರಮಾಣ ಇರುತ್ತದೆ ಎಂದು ತಿಳಿಸಿದ್ದಾರೆ.

12 ಸಾವಿರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದಾಗಿ ಕಂಪನಿಯು ಕಳೆದ ಆರ್ಥಿಕ ವರ್ಷದಲ್ಲಿ ಹೇಳಿತ್ತು. ಇಂತಹ ಆಲೋಚನೆ ಈಗಲೂ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕೃತಿವಾಸನ್, ‘ಕಂಪನಿಯಲ್ಲಿ ಉತ್ತಮವಾಗಿ ಕೆಲಸ ಮಾಡುವವರಿಗೆ, ಕಂಪನಿಯ ಅಭಿವೃದ್ಧಿ ಜೊತೆಗೆ ಅವರ ಬೆಳವಣಿಗೆ ಇರುತ್ತದೆ’ ಎಂದಷ್ಟೇ ಹೇಳಿದ್ದಾರೆ.

ಕಂಪನಿಯು ಯೋಜನೆಗಳನ್ನು ಕಾರ್ಯಗತಗೊಳಿಸುವ ಶೈಲಿಯು ಇತ್ತೀಚೆಗೆ ಬದಲಾಗಿದೆ. ಹೀಗಾಗಿ, ಹೆಚ್ಚಾಗಿ ಹಿರಿಯ ಶ್ರೇಣಿಯ ಸಿಬ್ಬಂದಿಯನ್ನು ಕೈಬಿಡಬೇಕಾಯಿತು ಎಂದು ತಿಳಿಸಿದ್ದಾರೆ.

2025–26ರ ಆರ್ಥಿಕ ವರ್ಷದಲ್ಲಿ ಕಂಪನಿಯು ₹3.72 ಲಕ್ಷ ಕೋಟಿ ಮೌಲ್ಯದ ಒಪ್ಪಂದಗಳನ್ನು ಪಡೆದುಕೊಂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1290349787

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.