ಮುಂಬೈ: ‘ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರ ದಂತಹ ವಿಷಯಗಳಲ್ಲಿ ಕಂಪನಿ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿದೆ’ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಭಾನುವಾರ ಸ್ಪಷ್ಟನೆ ನೀಡಿದೆ.

‘ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತ್ವರಿತ ಕ್ರಮ ಕೈಗೊಳ್ಳಲಾಗಿದೆ. ತನಿಖೆ ಮುಗಿಯುವವರೆಗೂ, ಆರೋಪ ಎದುರಿಸುತ್ತಿರುವ ಉದ್ಯೋಗಿಗಳನ್ನು ಅಮಾನತು ಮಾಡಲಾಗಿದೆ. ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ’ ಎಂದು ತಿಳಿಸಿದೆ.

‘ಕೆಲಸದ ಸ್ಥಳದಲ್ಲಿ ನಮ್ಮ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಸದಾಕಾಲ ಖಚಿತಪಡಿಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದೆ.

ಏನಿದು ಘಟನೆ?: ‘ನಾಸಿಕ್ ನಲ್ಲಿರುವ ಟಿಸಿಎಸ್ ಕಚೇರಿಯ ಹಿರಿಯ ಉದ್ಯೋಗಿಗಳು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತದ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ. ಈ ಬಗ್ಗೆ ಮಾನವ ಸಂಪನ್ಮೂಲ (ಎಚ್.ಆರ್) ವಿಭಾಗಕ್ಕೆ ದೂರು ನೀಡಿದರೂ ಸ್ಪಂದಿಸಿಲ್ಲ’ ಎಂದು ಆರೋಪಿಸಿ ಎಂಟು ಮಹಿಳಾ ಉದ್ಯೋಗಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಒಂಬತ್ತು ಎಫ್ಐಆರ್ಗಳು ದಾಖಲಾಗಿ ದ್ದವು. ಇದರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ಕಳೆದ ವಾರ ರಚಿಸಲಾಗಿತ್ತು.

ಪ್ರಕರಣ ಸಂಬಂಧ ಎಚ್.ಆರ್ ವಿಭಾಗದ ವ್ಯವಸ್ಥಾಪಕಿ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳನ್ನು ಡ್ಯಾನಿಶ್ ಶೇಖ್, ತೌಸಿಫ್ ಅತ್ತರ್, ರಜಾ ಮೆಮನ್, ಶಾರುಖ್ ಖುರೇಷಿ, ಶಫಿ ಶೇಖ್, ಆಸಿಫ್ ಮತ್ತು ಅನ್ಸಾರಿ ಎಂದು ಗುರುತಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-172466292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.