ಬುಧವಾರ, ಜನವರಿ 22, 2020
28 °C
ಟಾಟಾ ಸನ್ಸ್‌ಗೆ ಅಧ್ಯಕ್ಷರಾಗಿ ಸೈರಸ್‌ ಮಿಸ್ತ್ರಿ ಮರುನೇಮಕ ಆದೇಶ

ಎನ್‌ಸಿಎಲ್‌ಎಟಿ ವಿರುದ್ಧ ಸುಪ್ರೀಂಗೆ ಟಿಸಿಎಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟಾಟಾ ಸನ್ಸ್‌ನ ಪದಚ್ಯುತ ಅಧ್ಯಕ್ಷ ಸೈರಸ್‌ ಮಿಸ್ತ್ರಿ ವಿರುದ್ಧ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಸಹ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

ಮಿಸ್ತ್ರಿ ಅವರನ್ನು ಮರುನೇಮಕ ಮಾಡಿಕೊಳ್ಳಬೇಕೆಂಬ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ಆದೇಶವನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿರುವುದಾಗಿ ಷೇರುಪೇಟೆಗೆ ಮಾಹಿತಿ ನೀಡಿದೆ.

ಆದೇಶವನ್ನು ಪ್ರಶ್ನಿಸಿ, ಟಾಟಾ ಸನ್ಸ್ ಕೂಡಾ ಸುಪ್ರೀಂಕೋರ್ಟ್‌ಗೆ ಈಗಾಗಲೇ ಅರ್ಜಿ ಸಲ್ಲಿಸಿದೆ. 

ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷರಾಗಿರುವ ರತನ್‌ ಟಾಟಾ ಅವರೂ ಶುಕ್ರವಾರ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ‘ನ್ಯಾಯಮಂಡಳಿ ಆದೇಶವು ದೋಷಪೂರಿತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಾಭಾಸಗಳಿಂದ ಕೂಡಿದೆ’ ಎಂದು ರತನ್‌ ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು