ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಈ ತಿಂಗಳು ಟೆಸ್ಲಾ ಸಿಇಒ ಇಲಾನ್‌ ಮಸ್ಕ್‌ ಭೇಟಿ

Published 10 ಏಪ್ರಿಲ್ 2024, 23:30 IST
Last Updated 10 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ಟೆಸ್ಲಾ ಕಂಪನಿಯ ಸಿಇಒ ಇಲಾನ್‌ ಮಸ್ಕ್‌ ಅವರು ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ದೇಶದಲ್ಲಿ ಕಂಪನಿಯ ಹೂಡಿಕೆ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷದ ಜೂನ್‌ನಲ್ಲಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಸ್ಕ್‌ ಅವರನ್ನು ಭೇಟಿ ಮಾಡಿದ್ದರು. 2024ರಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಮಾತುಕತೆ ವೇಳೆ ಮಸ್ಕ್‌ ಪ್ರಕಟಿಸಿದ್ದರು.‌

ಕೇಂದ್ರ ಸರ್ಕಾರವು ಇತ್ತೀಚೆಗೆ ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ಅನುಮೋದನೆ ನೀಡಿದೆ. ದೇಶದಲ್ಲಿ ಕನಿಷ್ಠ ₹4,150 ಕೋಟಿ ಬಂಡವಾಳ ಹೂಡಿಕೆ ಮಾಡಿ ಇ.ವಿ ತಯಾರಿಕಾ ಘಟಕ ಸ್ಥಾಪಿಸುವ ಕಂಪನಿಗಳಿಗೆ ಆಮದು ಸುಂಕದಲ್ಲಿ ರಿಯಾಯಿತಿ ಘೋಷಿಸಿದೆ. ಭಾರತದ ಮಾರುಕಟ್ಟೆ ಪ್ರವೇಶಿಸಲು ಮುಂದಾಗಿರುವ ಟೆಸ್ಲಾ ಕಂಪನಿಗೆ ಇದು ವರದಾನವಾಗಿದೆ ಎಂದು ಮೂಲಗಳು ತಿಳಿಸಿವೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT